
ಪಾಂಡವಪುರ: ಬಾಯಿ ಕ್ಯಾನ್ಸರ್‌ಗೆ ಕಾರಣವಾಗಿರುವ ತಂಬಾಕು ಸೇವನೆಗೆ ಕಡಿವಾಣ ಹಾಕಬೇಕಿದೆ ಎಂದು ದಂತ ತಜ್ಞೆ ಡಾ.ಪ್ರಿಯದರ್ಶಿನಿ ಹೇಳಿದರು.
ತಾಲ್ಲೂಕಿನ ಚಿನಕುರಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಾಗೃತಿ ಹಾಗೂ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಬೀಡಿ, ಸಿಗರೇಟು ಸೇರಿ ತಂಬಾಕು ಉತ್ಪನ್ನಗಳ ಧೂಮಪಾನವನ್ನು ಜನರು ನಿಲ್ಲಿಸಬೇಕು. ಜತೆಗೆ ಗುಟ್ಕಾ, ಪಾನ್‌ಪರಾಗ್‌ನಂತಹ ವಸ್ತುಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಜನರು ತಾವು ಸೇವಿಸುವ ಆಹಾರ ಮತ್ತು ತಮ್ಮ ಜೀವನ ಶೈಲಿ ಉತ್ತಮವಾಗಿರಬೇಕು. ಆಗಾಗ್ಗೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಬಳಿಕ ಡಾ.ಪ್ರಿಯದರ್ಶಿನಿ ಅವರು ಜನರಿಗೆ ಬಾಯಿ ತಪಾಸಣೆ ಮಾಡಿ, ವೈದ್ಯಕೀಯ ಸಲಹೆ ನೀಡಿದರು.
ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದ್ಯಾಧಿಕಾರಿಗಳಾದ ಡಾ.ಸೀಮಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಸಿ. ಶಿವಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಪುಟ್ಟಸ್ವಾಮಿ, ಹರಿಕೃಷ್ಣ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಚಂದನ್, ವಿಜಯ್, ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.