ADVERTISEMENT

ಮಳವಳ್ಳಿ: ಮುಖ್ಯ ಕಾರ್ಯದರ್ಶಿಯಿಂದ ಟೋಲ್ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2025, 13:23 IST
Last Updated 24 ಏಪ್ರಿಲ್ 2025, 13:23 IST
ಮಳವಳ್ಳಿ ತಾಲ್ಲೂಕಿನ ಹೊಸಹಳ್ಳಿ ಬಳಿಯ ಗಗನಚುಕ್ಕಿ ಪ್ರೀ ಪ್ಲಾಜಾ(ಟೋಲ್) ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಎಡಿಸಿ ಬಿ.ಸಿ.ಶಿವಾನಂದ ಮೂರ್ತಿ, ತಹಶೀಲ್ದಾರ್ ಎಸ್.ವಿ.ಲೋಕೇಶ್ ಹಾಜರಿದ್ದರು

ಮಳವಳ್ಳಿ: ತಾಲ್ಲೂಕಿನ ಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209(948)ರ ಗಗನಚುಕ್ಕಿ ಪ್ರೀ ಪ್ಲಾಜಾಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಅಪೂರ್ಣ ಹಾಗೂ ಅವೈಜ್ಞಾನಿಕತೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಕಳೆದ ತಿಂಗಳು ಪ್ರತಿಭಟನೆ ನಡೆಸಿದ್ದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುರುವಾರ ಟೋಲ್‌ಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ADVERTISEMENT

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುಗಮ ಸಂಚಾರ ವ್ಯವಸ್ಥೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕುಮಾರ ಸೇರಿದಂತೆ ಹಲವು ಅಧಿಕಾರಗಳಿಂದ ಮಾಹಿತಿ ಪಡೆದುಕೊಂಡರು.

ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ತಹಶೀಲ್ದಾರ್ ಎಸ್.ವಿ.ಲೋಕೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.