ADVERTISEMENT

ಪಾಂಡವಪುರ: ತೊಣ್ಣೂರು ಕೆರೆಗೆ ಬಾಗಿನ ಅರ್ಪಣೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 7:29 IST
Last Updated 4 ಅಕ್ಟೋಬರ್ 2025, 7:29 IST
<div class="paragraphs"><p>ಪಾಂಡವಪುರ ತಾಲ್ಲೂಕಿನ ತೊಣ್ಣೂರು ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತು ಮುಖಂಡರು ಬಾಗಿನ ಅರ್ಪಿಸಿದರು.</p></div>

ಪಾಂಡವಪುರ ತಾಲ್ಲೂಕಿನ ತೊಣ್ಣೂರು ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮತ್ತು ಮುಖಂಡರು ಬಾಗಿನ ಅರ್ಪಿಸಿದರು.

   

ಪಾಂಡವಪುರ: ‘ಹೇಮಾವತಿ ನಾಲಾ ಅಚ್ಚುಕಟ್ಟು ವ್ಯಾಪ್ತಿಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ₹35 ಕೋಟಿ ಬಿಡುಗಡೆಗೊಳಿಸಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣವೇ ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.

ತಾಲ್ಲೂಕಿನ ಐತಿಹಾಸಿಕ, ಪ್ರವಾಸಿ ತಾಣ ತೊಣ್ಣೂರು ಕೆರೆಗೆ ಶುಕ್ರವಾರ ಬಾಗಿನ ಅರ್ಪಿಸಿ ಅವರು ಮಾತನಾಡಿದರು.

ADVERTISEMENT

‘ಕೆಲವು ದಿನಗಳ ಹಿಂದೆಯೂ ₹32 ಕೋಟಿ ಅನುದಾನ ಬಿಡುಗಡೆ ಮಾಡಿಸಿ ಹೇಮಾವತಿ ನಾಲೆಯನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರವಾಸಿ ತಾಣ ತೊಣ್ಣೂರು ಕೆರೆ ಅಭಿವೃದ್ಧಿ ಹಾಗೂ ಮೇಲುಕೋಟೆಯ ಸಮಗ್ರ ಅಭಿವೃದ್ಧಿಗೆ ಮೇಲುಕೋಟೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಆ ಮೂಲಕ ಎರಡು ಸ್ಥಳಗಳನ್ನು ಅಭಿವೃದ್ಧಿಪಡಿಸುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದೆ’ ಎಂದರು.

‘ಅನುದಾನ ಬಿಡುಗಡೆಯಾದ ಬಳಿಕ ಈ ಎರಡು ಸ್ಥಳಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಕ್ಕೆ ಉತ್ತೇಜನ ನೀಡಲಾಗುವುದು. ತೊಣ್ಣೂರು ಕೆರೆಯು ಈ ಭಾಗದ ಜನ–ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಜೊತೆಗೆ ನೂರಾರು ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸಿ ರೈತರ ಬದುಕಿಗೆ ಆಸರೆಯಾಗಿದೆ’ ಎಂದು ಹೇಳಿದರು.

ಕೆರೆ ಅಚ್ಚುಕಟ್ಟು ಪ್ರದೇಶಕ್ಕೆ ಸಮರ್ಪಕವಾಗಿ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ರೈತರು ತರಾಟೆ ತೆಗೆದುಕೊಂಡರು.

ಕಾವೇರಿ ನೀರಾವರಿ ನಿಗಮದ (ಎಚ್‌ಎಲ್‌ಬಿಸಿ) ಎಸ್‌ಇ ಗಂಗಾಧರ್, ಇಇ ಶ್ರೀನಾಥ್, ಎಇಇ ರಾಘವೇಂದ್ರ, ಪುಟ್ಟಮಾಯಿಗೌಡ, ಆನಂದ್, ಎಇ ಪುನೀತ್, ಟಿಎಪಿಸಿಎಂಎಸ್ ನಿರ್ದೇಶಕ ಟಿ.ಎಸ್.ಹಾಳಯ್ಯ, ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಮ್ಮ, ಸದಸ್ಯರಾದ ಭಾರತಿ, ಶಶಿಕಲಾ, ಕೆಂಪೇಗೌಡ, ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆನ್ನಾಳು ವಿಜಯಕುಮಾರ್, ಮಾಜಿ ಅಧ್ಯಕ್ಷ ಚಿಕ್ಕಾಡೆ ಹರೀಶ್, ಕಾರ್ಯದರ್ಶಿ ವೈ.ಪಿ.ಮಂಜು, ಸರ್ವೋದಯ ಕರ್ನಾಟಕ ಪಕ್ಷದ ತಾಲ್ಲೂಕು ಅಧ್ಯಕ್ಷ ಕೆ.ಎಸ್.ದಯಾನಂದ್, ಮುಖಂಡರಾದ ಕೋಟಿ ಶಂಕರೇಗೌಡ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.