ADVERTISEMENT

ಕರ್ತವ್ಯಕ್ಕೆ ಬರುವಂತೆ ಒತ್ತಡ: ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 10:16 IST
Last Updated 10 ಏಪ್ರಿಲ್ 2021, 10:16 IST
ಆತ್ಮಹತ್ಯೆಗೆ ಯತ್ನಿಸಿದ ಚಾಲಕ ರವಿಶಂಕರ್
ಆತ್ಮಹತ್ಯೆಗೆ ಯತ್ನಿಸಿದ ಚಾಲಕ ರವಿಶಂಕರ್   

ಮಳವಳ್ಳಿ: ಮಳವಳ್ಳಿಯಲ್ಲಿ ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಾಲಕ ರವಿಶಂಕರ್ ಆತ್ಮಹತ್ಯೆಗೆ ಯತ್ನಿಸಿದವರು.

ಡಿಪೊ ಮ್ಯಾನೇಜರ್ ಕರೆ ಮಾಡಿ ಕರ್ತವ್ಯಕ್ಕೆ ಬರುವಂತೆ ಒತ್ತಡ ಹಾಕಿದ್ದರು. ಬಾರದಿದ್ದರೆ ವರ್ಗಾವಣೆ ಮಾಡುವ ಬೆದರಿಕೆ ಹಾಕಿದ್ದರು. ಇದಕ್ಕೆ ಹೆದರಿದ ರವಿಶಂಕರ್, ಡಿಪೊ ಹಿಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.