ADVERTISEMENT

ನಾಗಮಂಗಲ | ಜುಲೈ13 ಕ್ಕೆ ಐದು ಸಾವಿರ ಗಿಡ ನೆಡುವ ಕಾರ್ಯಕ್ರಮ; ಮಾತೃ ಫೌಂಡೇಶನ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 10:06 IST
Last Updated 6 ಜುಲೈ 2025, 10:06 IST
   

ನಾಗಮಂಗಲ: ವಿಶ್ವ ಪರಿಸರ ದಿನಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ಜಿಲ್ಲಾಡಳಿ, ತಾಲ್ಲೂಕು ಕಸಾಪ, ವಕೀಲರ ಸಂಘ ಮತ್ತು ಎ.ಸಿ.ಯು ನ ಎನ್.ಎಸ್.ಎಸ್ ಘಟಕಗಳ ಸಹಯೋಗದಲ್ಲಿ ಬೆಂಗಳೂರಿನ ಮಾತೃ ಫೌಂಡೇಶನ್ ವತಿಯಿಂದ ಐದು ಸಾವಿರ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಆಯೋಜಿಸಿದ್ದು, ಪರಿಸರ ಪ್ರೇಮಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಮಾತೃ ಫೌಂಡೇಶನ್ ಅಧ್ಯಕ್ಷ ವಕೀಲ ಚಂದ್ರಕುಮಾರ್ ಮನವಿ ಮಾಡಿದರು.

ಪಟ್ಟಣದ ವಕೀಲರ ಸಂಘದಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೂರು ವರ್ಷಗಳಿಂದಲೂ ನಮ್ಮ ಫೌಂಡೇಶನ್ ವತಿಯಿಂದ ತಾಲ್ಲೂಕಿನ ವಿವಿಧ ಬೆಟ್ಟಗುಡ್ಡ, ಅರಣ್ಯ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಪರಿಸರ ದಿನದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಐದು ಸಾವಿರ ಗಿಡಗಳನ್ನು ನೆಡುವ ಜೊತೆಗೆ ಅವುಗಳನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತಾ ಬಂದಿದ್ದೇವೆ. ಈ ವರ್ಷ ಜು.13ರ ಭಾನುವಾರ ಬೆಳಿಗ್ಗೆ 9.30ಕ್ಕೆ ತಾಲ್ಲೂಕಿನ ಕಾಚೇನಹಳ್ಳಿ ಮತ್ತು ಅಂಕುಶಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ಮಾತೃಗೊಂದು ಮರ ಎಂಬ ಅಭಿಯಾನದಡಿಯಲ್ಲಿ ಐದು ಸಾವಿರ ಸಸಿಗಳನ್ನು ನೆಡಲಾಗುತ್ತಿದೆ.ಕಾರ್ಯಕ್ರಮಕ್ಕೆ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್, ಬಿ.ಎಂ.ಶ್ಯಾಮ್ ಪ್ರಸಾದ್, ಎಸ್.ರಾಚಯ್ಯ, ಟಿ.ಎಂ.ನಡಾಫ್ ಭಾಗವಹಿಸಲಿದ್ದಾರೆ ಎಂದರು.

ಅಲ್ಲದೇ ಉಪಲೋಕಾಯುಕ್ತರಾದ ಕೆ.ಎನ್.ಫಣೀಂದ್ರ, ಬಿ.ವೀರಪ್ಪ, ರಾಜ್ಯ ಗ್ರಾಹಕ ಆಯೋಗದ ಅಧ್ಯಕ್ಷ ಟಿ.ಜಿ.ಶಿವಶಂಕರೇಗೌಡ, ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದು, ತಾಲ್ಲೂಕಿನ ಸಾರ್ವಜನಿಕರು, ಪರಿಸರ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ವಕೀಲರಾದ ಮಹದೇವ್, ಹಡೇನಹಳ್ಳಿ, ಸಿದ್ಧಲಿಂಗೇಗೌಡ, ಪುರುಷೋತ್ತಮ್, ಮೋಹನ್ ಕುಮಾರ್, ಕೊಣನೂರು ಧನಂಜಯ್, ರವಿ, ಉಪನ್ಯಾಸಕ ಚಂದ್ರು, ಮಾತೃ ಫೌಂಡೇಶನ್ ಸದಸ್ಯರಾದ ಮಾಯಣ್ಣಗೌಡ, ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.