ADVERTISEMENT

ಸೌಲಭ್ಯದಿಂದ ವಂಚಿತರಾದ ತುಂಬಕೆರೆ ಅಲೆಮಾರಿ ಜನ: ಎಲ್‌.ಸಂದೇಶ್ ಬೇಸರ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2024, 14:22 IST
Last Updated 11 ಆಗಸ್ಟ್ 2024, 14:22 IST
ಮಂಡ್ಯ ತಾಲ್ಲೂಕಿನ ತುಂಬಕೆರೆ ಅಲೆಮಾರಿ ಬಡಾವಣೆಯಲ್ಲಿ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್‌.ಸಂದಶ್‌ ಮಾತನಾಡಿದರು
ಮಂಡ್ಯ ತಾಲ್ಲೂಕಿನ ತುಂಬಕೆರೆ ಅಲೆಮಾರಿ ಬಡಾವಣೆಯಲ್ಲಿ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್‌.ಸಂದಶ್‌ ಮಾತನಾಡಿದರು    

ಮಂಡ್ಯ: ‘ತುಂಬುಕೆರೆಯಲ್ಲಿ ಅಲೆಮಾರಿ ಜನಾಂಗದವರು ವಾಸವಿದ್ದು, ಅವರಿಗೆ ಜಾತಿ ಪ್ರಮಾಣ ಪತ್ರ ಸೇರಿದಂತೆ ಹಲವು ಸೌಲಭ್ಯಗಳು ಸಿಕ್ಕಿಲ್ಲ’ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್‌.ಸಂದಶ್‌ ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ತುಂಬಕೆರೆ ಅಲೆಮಾರಿ ಬಡಾವಣೆಯಲ್ಲಿ ಮಾನವ ಬಂಧುತ್ವ ವೇದಿಕೆ, ಕಾಯಕಯೋಗಿ ಫೌಂಡೇಷನ್, ಲಿಂಗಾಯತ ಮಹಾಸಭಾದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲೆಯ ವಿವಿಧೆಡೆ ಇರುವಂತಹ ಅಲೆಮಾರಿ ಸಮುದಾಯಕ್ಕೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಬದುಕನ್ನು ಅರಸುತ್ತಲೇ ಕಳೆದುಹೋಗುವ ಅಲೆಮಾರಿ ಜನಾಂಗಕ್ಕೆ ನೆಲೆ ಕಲ್ಪಿಸಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯ. ಆದರೆ ಸೌಲಭ್ಯಗಳಿಂದಲೇ ವಂಚಿತರಾಗುವುದು’ ದುರಂತ ಎಂದರು.

ADVERTISEMENT

‘ತುಂಬಕೆರೆಯಲ್ಲಿ ಹಲವು ವರ್ಷಗಳಿಂದ ವಾಸವಿರುವ ಅಲೆಮಾರಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ, ನಿವೇಶನದ ಹಕ್ಕು ಪತ್ರವೇ ಸಿಕ್ಕಿಲ್ಲ, ಜೊತೆಗೆ ಮೂಲ ಸೌಲಭ್ಯದಿಂದಲೇ ವಂಚಿತರಾಗಿದ್ದಾರೆ. ಇವರನ್ನು ಜಿಲ್ಲಾಡಳಿತ ಮತ್ತು ಸರ್ಕಾರ ಗುರುತಿಸಿ ಸಮಸ್ಯೆ ಬಗೆಹರಿಸಿಕೊಡಬೇಕು’ ಎಂದು ಮನವಿ ಮಾಡಿದರು.

ಕಾಯಕಯೋಗಿ ಫೌಂಡೇಷನ್ ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿದರು. ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಡಿ.ದೇವರಾಜ್‌ ಕೊಪ್ಪ, ಸಂಘಟಕ ಕಾರಸವಾಡಿ ಮಹದೇವು, ಉಪನ್ಯಾಸಕ ಲೋಕೇಶ್, ಮುಖಂಡರಾದ ಜಯಸುಧಾ, ಸಿದ್ಧಶೆಟ್ಟಿ, ಕಲಾವಿದ ವೈರಮುಡಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.