ADVERTISEMENT

ಮದ್ದೂರು | ಕಲ್ಲು ತೂರಾಟ ಪ್ರಕರಣ: 21 ಮಂದಿ ಬಂಧನ– SP ಮಲ್ಲಿಕಾರ್ಜುನ ಬಾಲದಂಡಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 9:33 IST
Last Updated 8 ಸೆಪ್ಟೆಂಬರ್ 2025, 9:33 IST
   

ಮದ್ದೂರು(ಮಂಡ್ಯ): ಪಟ್ಟಣದಲ್ಲಿ ಭಾನುವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 21 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಎಲ್ಲರನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. 

ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆವರೆಗೆ ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ‍ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT