ಬಂಧನ
(ಸಾಂದರ್ಭಿಕ ಚಿತ್ರ)
ಮಳವಳ್ಳಿ: ತಾಲ್ಲೂಕಿನ ನಿಡಘಟ್ಟ ಗೇಟ್ ಬಳಿ ಬುಧವಾರ ಸಂಜೆ ಗಾಂಜಾ ಮಾರಾಟ ಮಾಡುತ್ತಿದ್ದ ಅಗಸನಪುರದ ಉಮೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ರಾವಳೇಶ್ವರ ದೇವಸ್ಥಾನದ ಹೋಗುವ ರಸ್ತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಗ್ರಾಮಾಂತರ ಪೊಲೀಸರು ಬಂಧಿಸಿ 22.5 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾಟರಿ ಮಾರಾಟ, ವ್ಯಕ್ತಿ ಬಂಧನ: ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಬಸ್ ನಿಲ್ದಾಣದ ಸರ್ಕಲ್ ಬಳಿ ಕೇರಳ ರಾಜ್ಯದ ಲಾಟರಿ ಮಾಡುತ್ತಿದ್ದ ತಿ.ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಹೆಗ್ಗೂರಿನ ನಾಗೇಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 36 ಕೇರಳ ಲಾಟರಿಗಳು ಹಾಗೂ ₹4200ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.