ಅಮಾನತು
ಮಂಡ್ಯ: ಮುಖ್ಯಮಂತ್ರಿ ಸೇರಿದಂತೆ ಉನ್ನತ ಅಧಿಕಾರಿಗಳ ಸಹಿಯನ್ನೇ ಫೋರ್ಜರಿ ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಮಾಯಕ ಯುವಜನರನ್ನು ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಂಡಿದ್ದಾರೆ.
ಮಂಡ್ಯ ಗ್ರಾಮಾಂತರ ಠಾಣೆಯ ಚಿಕ್ಕಯ್ಯ ಹಾಗೂ ಸೆಂಟ್ರಲ್ ಠಾಣೆಯ ಲೋಕೇಶ್ ಅಮಾನತುಗೊಂಡವರು.
ಕೆಲಸ ಕೊಡಿಸುವುದಾಗಿ ನಿರುದ್ಯೋಗಿಗಳನ್ನು ನಂಬಿಸಿ, ಅವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿ ಈಗಾಗಲೇ ಜೈಲು ಪಾಲಾಗಿರುವ ವೆಂಕಟೇಶನಿಗೆ ಈ ಕಾನ್‌ಸ್ಟೆಬಲ್‌ಗಳು ಸಹಕರಿಸಿದ್ದರು ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ.
ವಂಚಕ ವೆಂಕಟೇಶನ ಜೊತೆ ಈ ಕಾನ್‌ಸ್ಟೆಬಲ್‌ಗಳು ಸಂಪರ್ಕದಲ್ಲಿ ಇದ್ದದ್ದು ಕಂಡುಬಂದಿದೆ. ಹೀಗಾಗಿ ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೋಟ್ಯಂತರ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.