ADVERTISEMENT

ಬೆಳ್ಳೂರು ಬಳಿ ಲಾರಿಗೆ ಕಾರು ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2020, 12:33 IST
Last Updated 8 ಡಿಸೆಂಬರ್ 2020, 12:33 IST
ನಾಗಮಂಗಲ ತಾಲ್ಲೂಕಿನ ಕಂಚಿನಕೋಟೆ ಗೇಟ್ ಸಮೀಪ ಅಪಘಾತಕ್ಕೀಡಾದ ಕಾರು
ನಾಗಮಂಗಲ ತಾಲ್ಲೂಕಿನ ಕಂಚಿನಕೋಟೆ ಗೇಟ್ ಸಮೀಪ ಅಪಘಾತಕ್ಕೀಡಾದ ಕಾರು   

ನಾಗಮಂಗಲ:ತಾಲ್ಲೂಕಿನ ಬೆಳ್ಳೂರು ಹೋಬಳಿಯ ಕಂಚಿನಕೋಟೆ ಗೇಟ್ ಸಮೀಪ ಸೋಮವಾರ ರಾತ್ರಿ ಚಲಿಸುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಹಾಸನದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಮಾರುತಿ ಸುಜುಕಿ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಗಾಯತ್ರಿ (35) ಸ್ಥಳದಲ್ಲೇ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಕೃಷ್ಣಪ್ಪ (70) ಆಸ್ಪತ್ರೆಯಲ್ಲಿ ಸತ್ತಿದ್ದಾರೆ.

ಧರ್ಮಸ್ಥಳಕ್ಕೆ ಹೋಗಿ ಹಿಂದಿರುಗುವಾಗ ಅಪಘಾತವಾಗಿದೆ. ಕಾರು ಚಾಲನೆ ಮಾಡುತ್ತಿದ್ದ ದಿನೇಶ್ ಮತ್ತು ತ್ರಿಷಾ, ಸರೋಜಮ್ಮ ತೀವ್ರವಾಗಿ ಗಾಯಗೊಂಡಿದ್ದು, ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಕಾರಿನಲ್ಲಿದ್ದವರು ಕೆ.ಆರ್‌.ಪೇಟೆ ತಾಲ್ಲೂಕಿನ ಸಂತೆಬಾಚಹಳ್ಳಿಯವರಾಗಿದ್ದು, ಬೆಂಗಳೂರಿನ ಲಗ್ಗೆರೆಯ ಚೌಡೇಶ್ವರಿ ನಗರದಲ್ಲಿ ನೆಲೆಸಿದ್ದರು.

ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದರು. ಫಟನೆ ಸಂಬಂಧ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.