
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಶ್ರೀರಂಗಪಟ್ಟಣ: ಪಟ್ಟಣದ ಬಳಿ, ಕಾವೇರಿ ನದಿಯಲ್ಲಿ ಶುಕ್ರವಾರ ಎರಡು ಅಪರಿಚಿತ ಶವಗಳು ಪತ್ತೆಯಾಗಿವೆ.
ಪಟ್ಟಣದ ರೈಲ್ವೆ ನಿಲ್ದಾಣದ
ಸಮೀಪ, ಸೇತುವೆ ಕೆಳಗೆ ನದಿಯಲ್ಲಿ ಸುಮಾರು 60 ವರ್ಷ ವಯಸ್ಸಿನ ಮಹಿಳೆಯ ಶವ ಕಂಡು ಬಂದಿದೆ. ಇದು ಭಾಗಶಃ ಕೊಳೆತ ಸ್ಥಿತಿಯಲ್ಲಿದ್ದು, ಗುರುತು ಪತ್ತೆಯಾಗಿಲ್ಲ.
ಪಟ್ಟಣದ ಉತ್ತರ ಕಾವೇರಿ ನದಿಯ ಸೇತುವೆ ಬಳಿ ನದಿಯಲ್ಲಿ ಸುಮಾರು 30 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತನ ಕೈ ಮೇಲೆ ಕಿರಾತಕ ಮತ್ತು ಎದೆಯ ಮೇಲೆ ಚಿನ್ನು, ತೇಜು ಎಂಬ ಹಚ್ಚೆ ಕಂಡುಬಂದಿದೆ.
ವಾರಸುದಾರರು ಇದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.