ADVERTISEMENT

ದ್ಯಾವಪಟ್ಟಣ: 11 ನಿರ್ದೇಶಕರ ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 20 ಮೇ 2025, 12:40 IST
Last Updated 20 ಮೇ 2025, 12:40 IST
ಬೆಳಕವಾಡಿ ಸಮೀಪದ ದ್ಯಾವಪಟ್ಟಣ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 11 ಮಂದಿ ನಿರ್ದೇಶಕರು ಅವಿರೋಧ ಆಯ್ಕೆಯಾದರು
ಬೆಳಕವಾಡಿ ಸಮೀಪದ ದ್ಯಾವಪಟ್ಟಣ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 11 ಮಂದಿ ನಿರ್ದೇಶಕರು ಅವಿರೋಧ ಆಯ್ಕೆಯಾದರು   

ಬೆಳಕವಾಡಿ: ಸಮೀಪದ ದ್ಯಾವಪಟ್ಟಣ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ 11 ಮಂದಿ ಅವಿರೋಧವಾಗಿ ಆಯ್ಕೆಯಾದರು.

ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡ ಸ್ಥಾನ ಹೊರತು ಪಡಿಸಿ ಉಳಿದ 11 ಸ್ಥಾನಗಳಿಗೆ 11 ಮಂದಿ ನಾಮಪತ್ರ ಸಲ್ಲಿಸಿದ್ದರು.

ನಿರ್ದೇಶಕರಾಗಿ ಸಾಮಾನ್ಯ ಕ್ಷೇತ್ರದಿಂದ ಚಂದ್ರಮ್ಮ, ನಾಗರತ್ನಮ್ಮ, ಮಲ್ಲಾಜಮ್ಮ, ಮಹದೇವಮ್ಮ, ಶಿವರತ್ನಮ್ಮ, ಸರೋಜಮ್ಮ, ಮಹದೇವಮ್ಮ, ಸುವರ್ಣಮ್ಮ, ಹಿಂದುಳಿದ ವರ್ಗ ಪ್ರವರ್ಗ ‘ಎ’ ಮೀಸಲು ಕ್ಷೇತ್ರದಿಂದ ಲೀಲಾವತಿ, ಹಿಂದುಳಿದ ವರ್ಗ ಪ್ರವರ್ಗ ‘ಬಿ’ ಮೀಸಲು ಕ್ಷೇತ್ರದಿಂದ ಗೌರಮ್ಮ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ನಾಗಮಣಿ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ಜಿ.ಎಂ. ರಾಮಕೃಷ್ಣ ಘೋಷಿಸಿದರು. ಸಂಘದ ಕಾರ್ಯದರ್ಶಿ ಮಹದೇವಮ್ಮ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.