ಮಳವಳ್ಳಿ: ಪ್ರಸ್ತುತದ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಜೊತೆಗೆ ಮೌಲ್ಯಧಾರಿತ ಶಿಕ್ಷಣದ ಅಗತ್ಯವಿದೆ ಎಂದು ತಹಶೀಲ್ದಾರ್ ಎಸ್.ವಿ.ಲೋಕೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಎನ್ಇಎಸ್ ಬಡಾವಣೆಯಲ್ಲಿ ಯೂರೋ ಕಿಡ್ಸ್ ಶಾಲೆಯ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಶಿಕ್ಷಣ ಸಂಸ್ಥೆಗಳು ಸೇವಾ ಮನೋಭಾವವನ್ನು ರೂಢಿಸಿಕೊಂಡು ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲು ಮುಂದಾಗಬೇಕು. ಮೌಲ್ಯಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬಾಲ್ಯದಿಂದಲೇ ಅನುಕೂಲವಾಗುವಂತೆ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ’ ಎಂದರು.
ಆರ್‌ಟಿಐನ ನಿವೃತ್ತ ಕಮಿಷನರ್ ಶ್ರೀನಿವಾಸ್ ಮಾತನಾಡಿ, ‘ಶಿಕ್ಷಣ ಕ್ಷೇತ್ರದಲ್ಲಿ ಬಂಡವಾಳ ಶಾಹಿಗಳ ಪ್ರಾಬಲ್ಯ ಹೆಚ್ಚುತ್ತಾ ಹಣಕ್ಕಾಗಿ ಶಾಲೆಗಳನ್ನು ಆರಂಭಿಸುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಉತ್ತಮ ಶಿಕ್ಷಣ ಪಡೆದು ಆಧುನಿಕ ತಕ್ಕಂತೆ ಗ್ರಾಮೀಣ ಮಕ್ಕಳಿಗೂ ಅತ್ಯುತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಮಕ್ಕಳಿಗೆ ಮುದ ನೀಡುವ ರೀತಿಯಲ್ಲಿ ಶಾಲೆ ಕಟ್ಟಡವನ್ನು ನಿರ್ಮಿಸಿರುವುದು ಶ್ಲಾಘನೀಯವಾಗಿದೆ’ ಎಂದು ಹೇಳಿದರು.
ಡಿವೈಎಸ್ಪಿ ವಿ.ಕೃಷ್ಣಪ್ಪ, ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್, ಮುಖ್ಯಶಿಕ್ಷಕಿ ವೇದಾ, ಮುಖಂಡರಾದ ಶಿವಲಿಂಗೇಗೌಡ, ಶಿವಮಾದೇಗೌಡ, ಕೆ.ಎಸ್. ದ್ಯಾಪೇಗೌಡ, ಕಂದೇಗಾಲ ಶ್ರೀನಿವಾಶ್, ವೆಂಕಟರಾಜು, ಹುಸ್ಕೂರು ಎಚ್.ಕೆ. ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.