ADVERTISEMENT

ಶ್ರೀರಂಗಪಟ್ಟಣ | ವರಮಹಾಲಕ್ಷ್ಮಿ ಹಬ್ಬ: ಗಮನ ಸೆಳೆದ ನೋಟುಗಳ ಅಲಂಕಾರ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2023, 13:33 IST
Last Updated 25 ಆಗಸ್ಟ್ 2023, 13:33 IST
ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ, ವರ ಮಹಾಲಕ್ಷ್ಮಿ ಹಬ್ಬದ ನಿಮಿತ್ತ ಶುಕ್ರವಾರ ದೇವಾಲಯದ ಗರ್ಭಗುಡಿಯನ್ನು ವಿವಿಧ ಮುಖ ಬೆಲೆಯ ನೋಟಗಳಿಂದ ಅಲಂಕಾರ ಮಾಡಲಾಗಿತ್ತು
ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ, ವರ ಮಹಾಲಕ್ಷ್ಮಿ ಹಬ್ಬದ ನಿಮಿತ್ತ ಶುಕ್ರವಾರ ದೇವಾಲಯದ ಗರ್ಭಗುಡಿಯನ್ನು ವಿವಿಧ ಮುಖ ಬೆಲೆಯ ನೋಟಗಳಿಂದ ಅಲಂಕಾರ ಮಾಡಲಾಗಿತ್ತು   

ಶ್ರೀರಂಗಪಟ್ಟಣ: ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಾಲಯದ ಗರ್ಭಗುಡಿಯನ್ನು ವಿವಿಧ ಮುಖ ಬೆಲೆಯ ನೋಟುಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.

ಚಾಮುಂಡೇಶ್ವರಿ ದೇವಿಗೆ ₹10, ₹20, ₹50, ₹100 ಮತ್ತು ₹500 ಮುಖ ಬೆಲೆಯ ನೋಟುಗಳಿಂದ ಅಲಂಕರಿಸಲಾಗಿತ್ತು. ಕಲಾವಿದ ಸಂದೇಶ್‌ ಮತ್ತು ಸ್ವೇಹಿತರ ಗುರುವಾರ ರಾತ್ರಿಯಿಂದ ಶುಕ್ರವಾರ ಮುಂಜಾನೆ ವರೆಗೂ ಒಟ್ಟು ₹2 ಲಕ್ಷ ಹಣದಿಂದ ಧನಲಕ್ಷ್ಮಿಯ ಅಲಂಕಾರ ಮಾಡಿದ್ದರು.

ದೇವಾಲಯದಲ್ಲಿ ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾದವು. ಪ್ರಧಾನ ಅರ್ಚಕ ಕೆ.ಎಸ್‌. ಲಕ್ಷ್ಮೀಶ್‌ ಶರ್ಮಾ ಅವರ ನೇತೃತ್ವದಲ್ಲಿ ದೇವಿಗೆ ಪಂಚಾಮೃತ ಅಭಿಷೇಕ , ಸಹಸ್ರನಾಮ, ಶ್ರೀ ಚಕ್ರ ನವಾವರಣ, ಮಹಾ ಮಂಗಳಾರತಿ ಇತರ ವಿಧಿ, ವಿಧಾನಗಳು ಜರುಗಿದವು. ಸ್ಥಳೀಯರು ಮಾತ್ರವಲ್ಲದೆ ಆಸುಪಾಸಿನ ಗ್ರಾಮಗಳ ನೂರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಪ್ರಸಾದ ವಿತರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.