ADVERTISEMENT

ಎಚ್‌ಡಿಕೆ ಮಂಡ್ಯದಲ್ಲಿ ಸ್ಪರ್ಧಿಸಿದರೆ ಸ್ವಾಗತ: ಶಾಸಕ ಎಂ.ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 14:08 IST
Last Updated 24 ಜನವರಿ 2023, 14:08 IST
ಮಂಡ್ಯ ತಾಲ್ಲೂಕಿ ಬಿ.ಗೌಡಗೆರೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಶ್ರೀನಿವಾಸ್‌ ಭೂಮಿಪೂಜೆ ನೆರವೇರಿಸಿದರು
ಮಂಡ್ಯ ತಾಲ್ಲೂಕಿ ಬಿ.ಗೌಡಗೆರೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಶ್ರೀನಿವಾಸ್‌ ಭೂಮಿಪೂಜೆ ನೆರವೇರಿಸಿದರು   

ಮಂಡ್ಯ: ‘ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವುದಾದರೆ ಸ್ವಾಗತಿಸುತ್ತೇನೆ’ ಎಂದು ಶಾಸಕ ಎಂ.ಶ್ರೀನಿವಾಸ್ ಹೇಳಿದರು.

ತಾಲ್ಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದವರು. ಅವರೇ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ನನ್ನ ಸಂಪೂರ್ಣ ಬೆಂಬಲ ಇರಲಿದೆ. ಅವರಿಂದಾದರೂ ಮಂಡ್ಯ ಜಿಲ್ಲೆ ಸಂಪೂರ್ಣ ಅಭಿವೃದ್ಧಿಯಾಗುತ್ತದೆ. ಅವರೇ ಬಂದರೆ ಒಳ್ಳೆಯದು, ಆ ಮೂಲಕ ಜನಾನುರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕನಸುಗಳು ನನಸಾಗುತ್ತವೆ. ಅವರು ಮಂಡ್ಯ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಾಕಷ್ಟು ಕನಸುಗಳು ಇಟ್ಟುಕೊಂಡಿದ್ದರು. ಅವರು ಇಲ್ಲಿ ಗೆದ್ದರೆ ಅವೆಲ್ಲವೂ ಸಾಕಾರಗೊಳ್ಳುತ್ತವೆ’ ಎಂದರು.

ADVERTISEMENT

‘ಕುಮಾರಣ್ಣ ಈ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾದಲ್ಲಿ ರಾಮರಾಜ್ಯದ ಕನಸು ಈಡೇರಿದಂತಾಗುತ್ತದೆ. ಪಂಚರತ್ನ ರಥಯಾತ್ರೆ ಮಂಡ್ಯ ಜಿಲ್ಲೆಗೆ ತುಂಬಾ ಅನುಕೂಲವಾಗಿದೆ. ಗ್ರಾಮೀಣ ಭಾಗದಲ್ಲಿ ಎಲ್ಲೇ ಕೇಳಿದರೂ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಐದು ಯೋಜನೆಗಳು ಜನಮನ ಸೂರೆಗೊಳ್ಳುತ್ತಿವೆ. ಹಾಗಾಗಿ ಜನತೆ ಜೆಡಿಎಸ್‌ನತ್ತ ಒಲವು ತೋರುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.