ADVERTISEMENT

‘ಯಾರು ಯಾರ ವಿರುದ್ಧ ತನಿಖೆ ನಡೆಸುತ್ತಾರೆ?’ ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 18:32 IST
Last Updated 21 ನವೆಂಬರ್ 2022, 18:32 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಮದ್ದೂರು (ಮಂಡ್ಯ): ‘ಮತದಾರರ ಪಟ್ಟಿ ಅಕ್ರಮಕ್ಕೆ ಸಂಬಂಧಿಸಿ ನಾವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧವೇ ದೂರು ನೀಡಿದ್ದೇವೆ. ಆದರೆ, ಅವರೇ ಪ್ರಕರಣವನ್ನು ತನಿಖೆಗೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಯಾರು ಯಾರ ವಿರುದ್ಧ ತನಿಖೆ ಮಾಡಿಸುತ್ತಾರೆ?’ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪಟ್ಟಣದ ಶಿವಪುರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಕ್ರಮವೇ ನಡೆದಿಲ್ಲ ಎಂದು ಮುಖ್ಯಮಂತ್ರಿ ಹೇಳಿಕೆ ನೀಡಿದ ಮೇಲೆ ಸತ್ಯ ಹೇಗೆ ಹೊರ ಬರುತ್ತದೆ ಎಂಬುದನ್ನು ಜನ ಅರ್ಥಮಾಡಿಕೊಳ್ಳಬೇಕು’ ಎಂದರು.

‘ಕಾಂಗ್ರೆಸ್ ದರೋಡೆ ಮಾಡುತ್ತಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ವಿರೋಧ ಪಕ್ಷದಲ್ಲಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿದ್ದಾರೆ. ಅವರೇ ಹಗಲು ದರೋಡೆ ನಡೆ ಸುತ್ತಿದ್ದು, ತಪ್ಪಾಗಿ ಕಾಂಗ್ರೆಸ್‌ ಎಂದು ಹೇಳಿರಬಹುದು’ ಎಂದು ತಿರುಗೇಟು ನೀಡಿದರು. ‘ನಮ್ಮ ಮೇಲೆ ಆರೋಪ ಮಾಡುವ ಅವರು ವಿರೋಧ ಪಕ್ಷದಲ್ಲಿದ್ದಾಗ ಏನು ಮಾಡುತ್ತಿದ್ದರು? ಆಗ ಕೊಲೆ ಮಾಡಿದ್ದೇವೆ ಎಂದು ಅವರೂ ಕೊಲೆ ಮಾಡುತ್ತಾರೆಯೇ? ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ಮೇಲೆ ಆರೋಪ ಮಾಡುತ್ತಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.