ಪೊಲೀಸ್ – ಪ್ರಾತಿನಿಧಿಕ ಚಿತ್ರ
ಕೆ.ಆರ್.ಪೇಟೆ: ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಬಣವೆಗೆ ಹೊತ್ತಿದ್ದ ಬೆಂಕಿ ನಂದಿಸಲು ಹೋಗಿ ಮೃತಪಟ್ಟ ಪ್ರಕರಣ ಸಂಬಂಧ ಗ್ರಾಮದ ಸವರ್ಣೀಯ ಯುವಕ ಅನಿಲ್‌ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
‘ಅನಿಲ್‌ಕುಮಾರ್ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದರಿಂದ ನನ್ನ ಪತಿ ಮನನೊಂದು ಹುಲ್ಲಿನ ಬಣವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
‘ಗ್ರಾಮದಲ್ಲಿ ನಮಗೆ ಸೇರಿರುವ ಗ್ರಾಂಟ್ ಜಮೀನಿನಲ್ಲಿ ಅನಿಲ್‌ಕುಮಾರ್ ಹುಲ್ಲಿನ ಬಣವೆ ಹಾಕಿಕೊಂಡಿದ್ದು, ತೆರವು ಮಾಡುವಂತೆ ಒತ್ತಾಯಿಸುತ್ತಾ ಬರಲಾಗಿತ್ತು. ಈ ಸಂಬಂಧ ಗ್ರಾಮದಲ್ಲಿ ರಾಜಿ ಪಂಚಾಯ್ತಿ ಮಾಡಿ ಅದು ಪ್ರಯೋಜನವಾಗದೇ ಇದ್ದುದರಿಂದ ನನ್ನ ಪತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಿಂದ ಅನಿಲ್‌ಕುಮಾರ್ ಮತ್ತು ನನ್ನ ಪತಿ ಜಯಕುಮಾರ್ ನಡುವೆ ಶನಿವಾರ ಪರಸ್ಪರ ಗಲಾಟೆ ನಡೆದಿತ್ತು’ ಎಂದು ತಿಳಿಸಿದ್ದಾರೆ.
‘ಆರೋಪಿಯು ನನ್ನ ಪತಿಯನ್ನು ಮನಬಂದಂತೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರಿಂದಲೇ ಮನನೊಂದು ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಪತಿಯ ಸಾವಿಗೆ ಕಾರಣನಾಗಿರುವ ಅನಿಲ್ ಕುಮಾರ್ ವಿರುದ್ಧ ಸೂಕಕ್ತ ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ನಾಗಮಂಗಲ ಡಿವೈಎಸ್‌ಪಿ ಚಲುವರಾಜು, ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಆನಂದ್ ಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.