ಹಲಗೂರು: ಸಮೀಪದ ಕರಲಕಟ್ಟೆ ಗ್ರಾಮದ ಜಮೀನಿನಲ್ಲಿ ಸೋಮವಾರ ನಸುಕಿನ ವೇಳೆ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಮೃತಪಟ್ಟಿತು.
ಎಚ್.ಸಿ.ರಮೇಶ ಅವರ ಜಮೀನಿನ ಸುತ್ತಲೂ ಸೋಲಾರ್ ತಂತಿ ಬೇಲಿ ಹಾಕಿ, ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಭಾನುವಾರ ತಡರಾತ್ರಿ ಮುತ್ತತ್ತಿ ಅರಣ್ಯ ಪ್ರದೇಶದಿಂದ ಬಂದ ಕಾಡಾನೆಗಳು ವಿದ್ಯುತ್ ಸ್ಪರ್ಶವಾಗಿ ಹಿಂದೆ ಸರಿದಿದ್ದವು. ಆದರೆ ಅವುಗಳ ಪೈಕಿ 30 ವರ್ಷದ ಗಂಡಾನೆ ಮೃತಪಟ್ಟಿತು.
ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿ ರಘು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ಸಿಪಿಐ ಬಿ.ಎಸ್.ಶ್ರೀಧರ್, ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಮಧುರ ಮೂರ್ತಿ, ಪಿಎಸ್ಐ ಲೋಕೇಶ, ಸೆಸ್ಕ್ ಮಳವಳ್ಳಿ ಗ್ರಾಮೀಣ ಉಪ ವಿಭಾಗದ ಎಇಇ ನಿತೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು.
ಡಾ.ವಸೀಂ ಮತ್ತು ಡಾ.ನವೀನ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.