ADVERTISEMENT

ಒಡೆಯರ್‌, ಕೆಂಪೇಗೌಡ ಸಮಸಮಾಜದ ಹರಿಕಾರರು: ಪ್ರೊ.ಜಯಪ್ರಕಾಶ್ ಗೌಡ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 14:00 IST
Last Updated 1 ಜುಲೈ 2025, 14:00 IST
ಮಳವಳ್ಳಿ ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು 
ಮಳವಳ್ಳಿ ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು    

ಮಳವಳ್ಳಿ: ನಾಡಿನ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ನಾಡಪ್ರಭು ಕೆಂಪೇಗೌಡರು ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ಹೇಳಿದರು.

ತಾಲ್ಲೂಕಿನ ಕೋರೇಗಾಲ ಗ್ರಾಮದಲ್ಲಿ ಶ್ರೀ ಬಾಲಾಜಿ ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನರಿಗೆ ಉದ್ಯೋಗ ಕಲ್ಪಿಸಲು ಅನೇಕ ಕಾರ್ಖಾನೆಗಳನ್ನು ಸ್ಥಾಪಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಳಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ಶಾಲಾ- ಕಾಲೇಜು ಆರಂಭಿಸಿದರು. ನಾಡಪ್ರಭು ಕೆಂಪೇಗೌಡರು ಕೋಟೆ, ಪೇಟೆ, ಗುಡಿ, ಕೆರೆ, ಉದ್ಯಾನವನಗಳ ಪರಿಕಲ್ಪನೆಗಳೊಂದಿಗೆ ನವ ಬೆಂಗಳೂರು ನಿರ್ಮಾಣಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ADVERTISEMENT

ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ ಮಾತನಾಡಿ, ಮಹನೀಯರನ್ನು ನಿರಂತರ ಸ್ಮರಿಸುವ ಜತೆಗೆ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಬೇಕು ಎಂದು ಸಲಹೆ ನೀಡಿದರು.

ವಿವಿಧ ಕ್ಷೇತ್ರಗಳ ಸಾಧಕರನ್ನು ಅಭಿನಂದಿಸಿ, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಲಾಯಿತು.

ಟ್ರಸ್ಟ್ ಅಧ್ಯಕ್ಷ ಕೆ.ಜಿ.ರಮೇಶ್, ಮನ್ ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ನಿವೃತ್ತ ಶಿಕ್ಷಕರಾದ ಎನ್.ನಾಗರಾಜು, ಕಾಂತರಾಜು ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮಾದಹಳ್ಳಿಯಲ್ಲಿ ಜಯಂತಿ: ತಾಲ್ಲೂಕಿನ ಮಾದಹಳ್ಳಿ ಗ್ರಾಮದ ಮುಖ್ಯ ರಸ್ತೆ ಬಳಿಯ ಗ್ರಾಮಸ್ಥರು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಿದರು.

ಗ್ರಾ.ಪಂ.ಮಾಜಿ ಸದಸ್ಯ ಎಂ.ಜಿ.ರಮೇಶ್ ಮಾತನಾಡಿ, ಕೆಂಪೇಗೌಡರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಸಲಹೆ ನೀಡಿದರು.

ಗ್ರಾ.ಪಂ. ಸದಸ್ಯ ಅಭಿಲಾಷ್ ಗೌಡ, ಸಹಕಾರ ಸಂಘದ ಅಧ್ಯಕ್ಷ ಆನಂದ್, ಮುಖಂಡರಾದ ಮಹೇಶ್, ದೇವರಾಜು, ಎಂ.ಪಿ.ರಾಜು, ಎಂ.ಪಿ.ಉಮೇಶ್, ಮೊಗಣ್ಣ, ಚಿಕ್ಕಣ್ಣ, ಕೆಂಪೇಗೌಡ, ಸುರೇಶ್, ಅಭಿ, ಗಿರೀಶ್, ಬಸವರಾಜು, ಪ್ರಕಾಶ್, ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.