ADVERTISEMENT

ಮಳವಳ್ಳಿ: ಸರಣಿ ಅಪಘಾತ ; ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 15:11 IST
Last Updated 13 ಸೆಪ್ಟೆಂಬರ್ 2020, 15:11 IST
ಅಪಘಾತದಲ್ಲಿ ಗಾಯಗೊಂಡವರನ್ನು ಪೊಲೀಸ್‌ ವಾಹನದಲ್ಲೇ ಆಸ್ಪತ್ರೆಗೆ ಕರೆತರಲಾಯಿತು
ಅಪಘಾತದಲ್ಲಿ ಗಾಯಗೊಂಡವರನ್ನು ಪೊಲೀಸ್‌ ವಾಹನದಲ್ಲೇ ಆಸ್ಪತ್ರೆಗೆ ಕರೆತರಲಾಯಿತು   

ಮಳವಳ್ಳಿ: ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಬಳಿ ಎರಡು ಕಾರು ಮತ್ತು ಬೈಕ್ ನಡುವೆಭಾನುವಾರ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚನ್ನಪಟ್ಟಣದ ನಿವಾಸಿ ಗಂಗಾ ಜೋಶಿ (40) ಮೃತ ಮಹಿಳೆ.

ಚನ್ನಪಟ್ಟಣದಿಂದ ಗಂಗಾ ಜೋಶಿ, ಮಧುಸೂದನ್ ಜೋಶಿ ಮತ್ತು ಅನುಷಾ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಯಳಂದೂರು ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಇದೇ ವೇಳೆ ಹಿಂದೆ ಬರುತ್ತಿದ್ದ ಬೈಕ್ ಸಹ ಕಾರಿಗೆ ಡಿಕ್ಕಿ ಹೊಡೆದಿದೆ.

ADVERTISEMENT

ಗಂಗಾ ಜೋಶಿ ಸ್ಥಳದಲ್ಲೇ ಮೃತಪಟ್ಟರೆ, ಮಧುಸೂದನ್ ಜೋಶಿ ಸ್ಥಿತಿ ಗಂಭೀರವಾಗಿದೆ.ಒಂಬತ್ತು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಕೆ.ಎಂ.ದೊಡ್ಡಿಯ ಖಾಸಗಿ ಆಸ್ಪತ್ರೆಗೆ ಹಾಗೂ ಕೆಲವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬರದಿದ್ದರಿಂದ ಪೊಲೀಸರು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಘಟನೆ ಸ್ಥಳಕ್ಕೆ ಬೆಳಕವಾಡಿ ಮತ್ತು ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.