ಮಳವಳ್ಳಿ: ಪಟ್ಟಣದ ಮೈಸೂರು ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟರು.
ಪಟ್ಟಣದ ಹಳೇ ಕೋರ್ಟ್ ಹಿಂಭಾಗದ ಬಡಾವಣೆಯ ಶಿವಲಿಂಗೇಗೌಡ ಅವರ ಪತ್ನಿ ಸುನೀತಾ (52) ಮೃತರು.
ಪಟ್ಟಣದ ಮೈಸೂರು ರಸ್ತೆಯ ಶಾಂತಿ ಕಾಲೇಜು ಬಳಿಯ ರಸ್ತೆ ಬದಿಯಲ್ಲಿ ನೀರು ತರಲು ಹೋಗುತ್ತಿದ್ದ ಸುನೀತಾ ಅವರಿಗೆ ಪಟ್ಟಣದ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಮೃತಪಟ್ಟರು.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.