ಮಂಡ್ಯ: ‘ಪುರುಷರಿಗೆ ಸಿಕ್ಕಿರುವಷ್ಟೇ ಮಹಿಳೆಯರಿಗೂ ರಾಜಕೀಯ ಪ್ರಾತಿನಿಧ್ಯ ಸಿಗುವುದು ಮುಖ್ಯವಾಗಬೇಕು’ ಎಂದು ಡಾ.ರಾಮ ಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಬಿ.ಎಸ್. ಶಿವಣ್ಣ ಒತ್ತಾಯಿಸಿದರು.
ಜನಪರ ಸಾಹಿತ್ಯ ಪರಿಷತ್, ಕರ್ನಾಟಕ ರಾಜ್ಯ ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್, ಮಂಡ್ಯ ಜಿಲ್ಲಾ ಕುರುಬರ ಸಂಘದ ವತಿಯಿಂದ ನಗರದ ಕನಕ ಸಮುದಾಯ ಭವನದಲ್ಲಿ ಭಾನುವಾರ ನೆಡೆದ ಅಹಲ್ಯಾಬಾಯಿ ಹೋಳ್ಕರ್ ಅವರ 300ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕೇಂದ್ರ ಸರ್ಕಾರವು ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಶೇ 50ರಷ್ಟು ಮೀಸಲಾತಿ ಮಾಡುವ ನಿರ್ಣಯ ಕೂಡಲೇ ಮಂಡಿಸಬೇಕು. ಈ ಬಗ್ಗೆ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಖಾಸಗಿ ನಿರ್ಣಯ ಮಂಡಿಸಿ ಮಹಿಳೆಯರಿಗೆ ಶೇ 50ರಷ್ಟು ರಾಜಕೀಯ ಮೀಸಲಾತಿ ಕೊಡಿಸುವ ಮೂಲಕ ಸಮಸಮಾಜದ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.
ಅಹಲ್ಯಾಬಾಯಿ ಹೋಳ್ಳರ್ ಮಹಿಳಾ ಸಾಂಸ್ಕೃತಿಕ ಪರಿಷತ್ತಿನ ರಾಜ್ಯ ಘಕಟದ ಅಧ್ಯಕ್ಷೆ ಕೆ.ಆರ್.ಪ್ರಭಾವತಿ ಮಾತನಾಡಿ, ‘ಅಹಲ್ಯಾಬಾಯಿ ಅವರು ಸಣ್ಣ ವಯಸ್ಸಿನಲ್ಲಿ ವಿಧವೆ ಆದರೂ ಸತಿ ಸಹಗಮನ ಪದ್ಧತಿ ತೊರೆದು ರಾಜ್ಯಭಾರ ನಡೆಸಿದ ದಿಟ್ಟಮಹಿಳೆ. ಬ್ರಿಟಿಷರ ವಿರುದ್ಧ ಹೋರಾಟ ಮಾಡಿದವರು ಅವರ ಸ್ಟೈರ್ಯ, ಧೈರ್ಯವನ್ನು ಮೆಚ್ಚಬೇಕು’ ಎಂದು ಶ್ಲಾಘಿಸಿದರು.
ಜಿಲ್ಲಾ ಹಿಂದುಳಿದ ವರ್ಗದ ಕಲ್ಯಾಣ ಅಧಿಕಾರಿ ಮಂಜುಳಾ ಮಾತನಾಡಿದರು. ಮುಖಂಡರಾದ ಸೌಮ್ಯಾರೆಡ್ಡಿ, ಸಾವಿತ್ರಮ್ಮ, ಸುಬ್ಬಣ್ಣ, ಮಲ್ಲಿಕಾರ್ಜುನ, ಎಂ.ಎಲ್. ಸುರೇಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.