ADVERTISEMENT

ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ದುಡಿಯುವೆ: ಎಸ್‌.ಆರ್‌.ಮಂಜುನಾಥ್‌ಗೌಡ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 13:29 IST
Last Updated 21 ಆಗಸ್ಟ್ 2024, 13:29 IST
<div class="paragraphs"><p>ಎಸ್‌.ಆರ್‌.ಮಂಜುನಾಥ್‌ಗೌಡ</p></div>

ಎಸ್‌.ಆರ್‌.ಮಂಜುನಾಥ್‌ಗೌಡ

   

ಮಂಡ್ಯ: ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯವನ್ನು ಒದಗಿಸಿಕೊಡಲು ಶ್ರಮ ವಹಿಸುವೆ ಎಂದು  ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಆರ್‌. ಮಂಜುನಾಥ್‌ಗೌಡ ವಿಶ್ವಾಸ ವ್ಯಕ್ತಪಡಿಸಿದರು.

‘ಕೃಷಿ ಹಾಗೂ ರೈತರ ಸಮಸ್ಯೆಗಳು ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡಲು ನಮ್ಮ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿಶೇಷ ಗಮನ ಹರಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ತಿಳಿಸಿದರು.

ADVERTISEMENT

ಬೆಂಗಳೂರಿನಲ್ಲಿರುವ ಕೃಷಿಕ ಸಮಾಜದ ಕಟ್ಟಡ ಹಲವು ಸಮಸ್ಯೆಗಳಿಂದ ಕೂಡಿದ್ದು, ಅದನ್ನು ಸರಿಪಡಿಸುವ ಹಂತದಲ್ಲಿ ಹೆಜ್ಜೆ ಇರಿಸಿದ್ದೇವೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲಿರುವ ಕೃಷಿಕ ಸಮಾಜದ ಕಟ್ಟಡವೂ ಜಿಲ್ಲಾಧಿಕಾರಿಗಳ ಸುಪರ್ದಿಯಲ್ಲಿದ್ದು, ಅದನ್ನು ಕೃಷಿಕ ಸಮಾಜದ ಆಸ್ತಿಯನ್ನಾಗಿ ಪರಿವರ್ತನೆ ಮಾಡಿಕೊಡುವಂತೆ ಮನವಿ ಮಾಡಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಾಗಮಂಗಲ ಮುಖಂಡರಾದ ಈಶ್ವರಪ್ರಸಾದ್, ವೆಂಕಟೇಶ್, ನಾಗರಾಜು, ವಿಶ್ವಾಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.