ಶ್ರೀರಂಗಪಟ್ಟಣ: ದೈಹಿಕ ಮತ್ತು ಮಾನಸಿಕ ಕಾಯಿಲೆಗೆ ಕಾರಣವಾಗುವ ತಂಬಾಕು ಉತ್ಪನ್ನಗಳ ಬಳಕೆಯಿಂದ ದೂರ ಇರಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. ಹರೀಶಕುಮಾರ್ ಸಲಹೆ ನೀಡಿದರು.
ಆರೋಗ್ಯ ಇಲಾಖೆ, ವಕೀಲರ ಸಂಘ, ಕಾನೂನು ಸೇವಾ ಸಮಿತಿ ಹಾಗೂ ಸರ್ಕಾರಿ ಐಟಿಐ ಕಾಲೇಜು ವತಿಯಿಂದ ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ವಿಶ್ವ ತಂಬಾಕು ರಹಿತ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ತಂಬಾಕು ಉತ್ಪನ್ನಗಳ ಆಕರ್ಷಕ ಜಾಹೀರಾತುಗಳು ಜನರನ್ನು ಸಳೆಯುತ್ತಿವೆ. ಒಮ್ಮೆ ದುಶ್ಚಟಕ್ಕೆ ದಾಸರಾದರೆ ಅದನ್ನು ತ್ಯಜಿಸುವುದು ಕಷ್ಟ. ವಿಶ್ವ ಆರೋಗ್ಯ ಸಂಸ್ಥೆ 1987ರಿಂದ ತಂಬಾಕು ಉತ್ಪನ್ನಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಅವುಗಳ ಬಳಕೆ ನಿಂತಿಲ್ಲ’ ಎಂದು ವಿಷಾದಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ. ವೇಣುಗೋಪಾಲ್ ಮಾತನಾಡಿ, ‘ನಿಷೇಧಿತ ತಂಬಾಕು ಉತ್ಪನ್ನಗಳ ಮಾರಾಟ ಶಿಕ್ಷಾರ್ಹ ಅಪರಾಧ’ ಎಂದು ಎಚ್ಚರಿಸಿದರು.
ಹಿರಿಯ ದಂತ ವೈದ್ಯಾಧಿಕಾರಿ ಡಾ. ಜೆ.ಡಿ. ಸ್ಮಿತಾ, ಆಡಳಿತ ವೈದ್ಯಾಧಿಕಾರಿ ಟಿ.ಜೆ. ತಾರಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ, ವಕೀಲರ ಸಂಘದ ಅಧ್ಯಕ್ಷ ಮರೀಗೌಡ, ಕಾರ್ಯದರ್ಶಿ ಸಿ.ಆರ್. ದಿನೇಶ್, ಜಂಟಿ ಕಾರ್ಯದರ್ಶಿ ಮಂಜುನಾಥ್, ಐಟಿಐ ಕಾಲೇಜು ಪ್ರಾಂಶುಪಾಲ ಚಂದ್ರಹಾಸ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಾಜ, ಹೇಮಣ್ಣ, ಫಣೀಂದ್ರ, ಚಂದನ್, ಅಭಿನಂದನ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.