
ಮಂಡ್ಯ: ವಿದ್ಯಾರ್ಥಿ ದಿಸೆಯಲ್ಲಿಯೇ ಯೋಗ, ಧ್ಯಾನ, ಕ್ರೀಡಾಸಕ್ತಿಯನ್ನು ಬೆಳೆಸುವುದು ಮುಖ್ಯವಾಗಬೇಕು ಮೂಲಕ ಎಂದು ನಗರಸಭೆ ಪೌರಾಯುಕ್ತೆ ಪಂಪಶ್ರೀ ಹೇಳಿದರು.
ನಗರದ ಸ್ವರ್ಣಸಂದ್ರ ಬಡಾವಣೆಯ ಶಿವಕುಮಾರ ಸ್ವಾಮೀಜಿ ಉದ್ಯಾನವನದ ಧ್ಯಾನಕೇಂದ್ರದಲ್ಲಿ ಕಾಯಕಯೋಗಿ ಫೌಂಡೇಷನ್ ವತಿಯಿಂದ ಶುಕ್ರವಾರ ನಡೆದ ‘ದಾಸೋಹ ಹುಣ್ಣಿಮೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಮಕ್ಕಳ ಮಾನಸಿಕ ಶಕ್ತಿ ಹೆಚ್ಚಳ ಮಾಡಿಕೊಳ್ಳುವ ಕಡೆ ಗಮನ ಹರಿಸಬೇಕಿದೆ. ಧ್ಯಾನದ ಬಲದಿಂದ ಆತ್ಮವಿಶ್ವಾಸ ಬರುತ್ತದೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಬಡವ ಶ್ರೀಮಂತನೆಂಬ ಭೇದವಿಲ್ಲದೆ ಎಲ್ಲಾ ಜಾತಿ ಧರ್ಮದವರಿಗೂ ಉಚಿತವಾಗಿ ಅನ್ನ, ಅಕ್ಷರ, ವಸತಿ ಕಲ್ಪಿಸಿ ತ್ರಿವಿಧ ದಾಸೋಹಿಯಾದ ತುಮಕೂರಿನ ಶಿವಕುಮಾರ ಸ್ವಾಮೀಜಿ ಎಲ್ಲರಿಗೂ ದಾರಿದೀಪವಾಗಿ ನಿಲ್ಲುತ್ತಾರೆ’ ಎಂದು ಶ್ಲಾಘಿಸಿದರು.
ನಗರಸಭೆ ಸದಸ್ಯೆ ಕೆ.ವಿದ್ಯಾ ಮಂಜುನಾಥ್ ಮಾತನಾಡಿ, ಪ್ರತಿಯೊಬ್ಬರಿಗೂ ಪರಿಸರ ಕಾಳಜಿ ಇದ್ದಾಗ ಮಾತ್ರ ಸುಂದರವಾದ ವಾತಾವರಣ ನಿರ್ಮಾಣವಾಗಲು ಸಾಧ್ಯ ಎಂದರು.
ಗೋಜು-ರಿಯೋ ಕರಾಟೆ ಡೋ ಅಕಾಡೆಮಿ ವತಿಯಿಂದ ಕರಾಟೆ ತರಬೇತುದಾರ ಲೋಕೇಶ್ ಮೊದಲಿಯಾರ್ ನೇತೃತ್ವದಲ್ಲಿ ಕರಾಟೆ, ಯೋಗ ಮತ್ತು ಧ್ಯಾನ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅನನ್ಯ ಆರ್ಟ್ ಸಂಸ್ಥೆಯ ಬಿ.ಎಸ್.ಅನುಪಮಾ, ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್, ಮುಖಂಡರಾದ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ, ಮೆಣಸಗೆರೆ ಶಿವಲಿಂಗಪ್ಪ, ಶಿವರುದ್ರಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.