ADVERTISEMENT

ಎಂಜಿನಿಯರಿಂಗ್ ವಿಚಾರಸಂಕಿರಣ ನಾಳೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2012, 7:35 IST
Last Updated 11 ಜುಲೈ 2012, 7:35 IST

ಮೈಸೂರು: `ಎಂಜಿನಿಯರಿಂಗ್ ಹಾಗೂ ಮ್ಯಾನೇಜ್‌ಮೆಂಟ್‌ನ ಪ್ರಸ್ತುತ ಶೈಲಿ~ ಕುರಿತು ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿಂಗ್ ವತಿಯಿಂದ ಮೂರು ದಿನಗಳ ಅಂತರರಾಷ್ಟ್ರೀಯ ವಿಚಾರಸಂಕಿರಣ ಜುಲೈ 12 ರಿಂದ 14ರವರೆಗೆ ಕಾಲೇಜು ಆವರಣದ ಸಾಹುಕಾರ್ ಚನ್ನಯ್ಯ ಸಭಾಂಗಣದಲ್ಲಿ ನಡೆಯಲಿದೆ.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸದಾಶಿವೇಗೌಡ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಈ ವಿಚಾರಸಂಕಿರಣಕ್ಕಾಗಿ ದೇಶ-ವಿದೇಶಗಳಿಂದ 526 ಪ್ರಬಂಧಗಳು ಬಂದಿದ್ದು, ಅವುಗಳಲ್ಲಿ 286ನ್ನು ಈ ಮಂಡಿಸಲಾಗುತ್ತದೆ. ಎಲ್ಲ ಪ್ರಬಂಧಗಳೂ ಇರುವ ಸಿ.ಡಿ.ಯನ್ನೂ ತಯಾರಿಸಲಾಗುತ್ತದೆ .

ಅಂದಾಜು 400 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಗೂ ಪ್ರವೇಶವಿದೆ ಎಂದು ಅವರು ತಿಳಿಸಿದರು.

ಜುಲೈ 12ರಂದು ಬೆಳಿಗ್ಗೆ 10ಕ್ಕೆ ಬೆಂಗಳೂರು ವಿವಿಯ ಮಾಜಿ ಕುಲಪತಿ ಪ್ರೊ.ಎನ್.ಆರ್.ಶೆಟ್ಟಿ, ಬೆಳಗಾವಿ ರಾಣಿ ಚೆನ್ನಮ್ಮ ವಿವಿಯ ಕುಲಪತಿ ಪ್ರೊ.ಬಿ.ಆರ್.ಅನಂತನ್, ವಿದ್ಯಾವರ್ಧಕ ಸಂಘ ಕಾರ್ಯದರ್ಶಿ ಪಿ.ವಿಶ್ವನಾಥ್ ಆಗಮಿಸುವರು. ವಿದ್ಯಾವರ್ಧಕ ಸಂಘ ಅಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸುವರು.

ಜುಲೈ 14 ರಂದು ಮಧ್ಯಾಹ್ನ 3ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ರಿಜಿಸ್ಟ್ರಾರ್ ಡಾ.ಎಸ್.ಎ.ಕೋರಿ ಅತಿಥಿಗಳಾಗಿ ಆಗಮಿಸುವರು. ವಿದ್ಯಾವರ್ಧಕ ಸಂಘ ಅಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸುವರು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.