ADVERTISEMENT

`ಕಪಿಲಾ ಸೇತುವೆ ಶೀಘ್ರವೇ ಲೋಕಾರ್ಪಣೆ'

​ಪ್ರಜಾವಾಣಿ ವಾರ್ತೆ
Published 10 ಜೂನ್ 2013, 8:13 IST
Last Updated 10 ಜೂನ್ 2013, 8:13 IST

ತಿ.ನರಸೀಪುರ : ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಬೃಹತ್ ಕಬಿನಿ ಸೇತುವೆ ಕಾಮಗಾರಿ ಮುಕ್ತಾಯ ಹಂತದಲ್ಲಿದೆ ಎಂದು ಚಾಮರಾಜನಗರ ಸಂಸದ ಆರ್. ಧ್ರುವನಾರಾಯಣ್ ತಿಳಿಸಿದರು.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ ಕ್ಷೇತ್ರವನ್ನು ಪ್ರತಿನಿಧಿಸುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಕೇಂದ್ರದ ಭೂ ಸಾರಿಗೆ ಸಚಿವ ಜೋಷಿ ಸೇರಿದಂತೆ ವಿವಿಧ ಗಣ್ಯರನ್ನು ಕರೆಯಿಸಿ ಸೇತುವೆ ಉದ್ಘಾಟಿಸಲಾಗುವುದು. ಜುಲೈ ಅಥವಾ ಆಗಸ್ಟ್‌ನಿಂದ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗಲಿದೆ ಎಂದು ಅವರು ಹೇಳಿದರು. 

ಚಾಮರಾಜನಗರ ಲೋಕಸಭಾ ಕ್ಷೇತ್ರದ ಯುವ ಘಟಕದ ಉಪಾಧ್ಯಕ್ಷ ಹೆಳವರಹುಂಡಿ ಸೋಮು, ಕುರುಬರ ಸಂಘದ ನಿರ್ದೇಶಕ ಎಂ.ಕೆ.ಸಹದೇವ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.