ADVERTISEMENT

ದಕ್ಷಿಣ ಕನ್ನಡ ಜಿಲ್ಲೆಗೆ ಸಮಗ್ರ ಪ್ರಶಸ್ತಿ

ರಾಜ್ಯ ಮಟ್ಟದ ಅಥ್ಲೆಟಿಕ್ಸ್

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2013, 9:32 IST
Last Updated 5 ಸೆಪ್ಟೆಂಬರ್ 2013, 9:32 IST
ಕೆ.ಆರ್.ನಗರ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ವಿದ್ಯಾಭಾರತಿ ಕರ್ನಾಟಕ ಸಂಸ್ಥೆ ಆಶ್ರಯದಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ದಕ್ಷಿಣ ಕನ್ನಡ ಜಿಲ್ಲೆ ವಿದ್ಯಾರ್ಥಿನಿ ದೀಕ್ಷಾ ಅವರ ಎತ್ತರ ಜಿಗಿತದ ಭಂಗಿ.
ಕೆ.ಆರ್.ನಗರ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ವಿದ್ಯಾಭಾರತಿ ಕರ್ನಾಟಕ ಸಂಸ್ಥೆ ಆಶ್ರಯದಲ್ಲಿ ಮಂಗಳವಾರ ನಡೆದ ರಾಜ್ಯಮಟ್ಟದ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ದಕ್ಷಿಣ ಕನ್ನಡ ಜಿಲ್ಲೆ ವಿದ್ಯಾರ್ಥಿನಿ ದೀಕ್ಷಾ ಅವರ ಎತ್ತರ ಜಿಗಿತದ ಭಂಗಿ.   

ಕೆ.ಆರ್.ನಗರ: ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸೆಪ್ಟಂಬರ್ 1ರಿಂದ 3ರವರೆಗೆ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಉದ್ದ ಜಿಗಿತ, ಎತ್ತರ ಜಿಗಿತ, ಟ್ರಿಪಲ್ ಜಂಪ್, ಓಟ, ಹರ್ಡಲ್ಸ್, ರಿಲೇ, ನಡಿಗೆ, ಗುಂಡು ಎಸೆತ, ಜಾವಲಿನ್ ಎಸೆತ, ಚಕ್ರ ಎಸೆತ ಸೇರಿದಂತೆ ವಿವಿಧ ಸ್ಪರ್ಧೆಗಳು ಮೂರು ದಿನಗಳ ಕಾಲ ನಡೆದವು. ಪಟ್ಟಣದ ವಾಸವಿ ವಿದ್ಯಾಸಂಸ್ಥೆ ಕ್ರೀಡಾಕೂಟದ ಪ್ರಾಯೋಜಕತ್ವ ವಹಿಸಿಕೊಂಡಿತ್ತು.

ವಿಧಾನ ಪರಿಷತ್ ಸದಸ್ಯ ಗೋ. ಮಧುಸೂಧನ್ ಭಾನುವಾರ ಕ್ರೀಡಾಕೂಟ ಉದ್ಘಾಟಿಸಿದರು. ಯಾವುದೇ ಕ್ರೀಡೆಗಳಲ್ಲಿ ಗೆಲುವಿಗಿಂತ, ಭಾಗವಹಿಸು ವುದು ಮುಖ್ಯ ಎಂದರು.

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರದ ಸಹ ಸಂಘಟನಾ ಕಾರ್ಯದರ್ಶಿ ಜಿ.ಆರ್. ಜಗದೀಶ್ , ಅಧ್ಯಕ್ಷ ಎಚ್.ಆರ್. ರಾಮಾನುಜಶೆಟ್ಟಿ, ಕ್ರಿಕೆಟ್ ತರಬೇತುದಾರ ಕೆ.ಎಂ. ವಿಶ್ವನಾಥ್, ಡಾ.ದೇವಪಾಲ್, ರಘುವೀರ್, ಡಾ.ಎಲ್. ಅಮರ್‌ನಾಥ್, ಪ್ರಭಾಕರ್ ಜೈನ್, ಪಿ.ಆರ್. ವಿಶ್ವನಾಥ್‌ಶೆಟ್ಟಿ, ಉಮಾಕಾಂತ್, ದೈಹಿಕ ಶಿಕ್ಷಣ ಶಿಕ್ಷಕ ಅನಂತರಾಜ್, ಕಾಂತರಾಜ್ ಇದ್ದರು.

ವಿದ್ಯಾಭಾರತಿ ಕರ್ನಾಟಕ ಸಂಸ್ಥೆ ಆಶ್ರಯದಲ್ಲಿ ನಡೆದ ಮೂರು ದಿನಗಳ ಕ್ರೀಡಾಕೂಟದಲ್ಲಿ ಗುಲ್ಬರ್ಗ, ಬೆಳಗಾವಿ, ಧಾರವಾಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.