ADVERTISEMENT

ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2013, 8:30 IST
Last Updated 6 ಸೆಪ್ಟೆಂಬರ್ 2013, 8:30 IST

ಎಚ್.ಡಿ.ಕೋಟೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಕಾಣಲು ಸಾಧ್ಯವಾಗುತ್ತಿದೆ ಎಂದು ಪಡುವಲು ವಿರಕ್ತ ಮಠದ ಮಹದೇವಸ್ವಾಮೀಜಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಡಿ.ಬಿ. ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬುಧವಾರ ನೂತನ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಉದ್ಘಾಟಿಸಿ ಮಾತನಾಡಿದರು.

ದೊಡ್ಡಬೈರನಕುಪ್ಪೆ, ಮಚ್ಚೂರು, ಹೊಸೂರಿನಂತಹ ಕಾಡಂಚಿನ ಗ್ರಾಮಗಳಲ್ಲಿ ಮೂಲ ಸೌಕರ್ಯಗಳನ್ನು ದೊರೆಯುವಂತೆ ಮಾಡಬೇಕು ಎಂದರು.

ಯೋಜನೆಯ ಯೋಜನಾಧಿಕಾರಿ ಉಮಾರಬ್ಬ ಮಾತನಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಪ್ರಜ್ವಲ್‌ಕುಮಾರ್, ಡಿ.ಬಿ. ಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹೇಮಂತ್‌ಕುಮಾರ್, ಮುಖ್ಯಶಿಕ್ಷಕ ಶಮಂತಕರತ್ನ, ಮಹೇಶ್, ವೇಣುಗೋಪಾಲ್, ಸದಾಶಿವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.