ADVERTISEMENT

ಫೇಸ್‌ಬುಕ್‌ನಲ್ಲಿ ಅಶ್ಲೀಲ ಚಿತ್ರ : ಪಾಲಿಕೆ ಸದಸ್ಯ ನಂದೀಶ್ ದೂರು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2012, 8:10 IST
Last Updated 5 ಏಪ್ರಿಲ್ 2012, 8:10 IST

ಮೈಸೂರು: ಅಂತರ್ಜಾಲದ ಫೇಸ್‌ಬುಕ್ ಖಾತೆಯಲ್ಲಿ ದುಷ್ಕರ್ಮಿಗಳು ಅಶ್ಲೀಲ ಚಿತ್ರಗಳನ್ನು ಸೇರಿಸಿದ್ದಾರೆ ಎಂದು ಆರೋಪಿಸಿ ಪಾಲಿಕೆ ಸದಸ್ಯ ನಂದೀಶ್ ಪ್ರೀತಂ ಪೊಲೀಸರಿಗೆ ದೂರು ನೀಡಿದ್ದಾರೆ.

`ಎರಡು ವರ್ಷಗಳ ಹಿಂದೆ ಫೇಸ್‌ಬುಕ್‌ನಲ್ಲಿ ನಂದೀಶ್ ಪ್ರೀತಂ ಎಂದು ಖಾತೆಯನ್ನು ತೆರೆದಿದ್ದೆ. ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಬರುವ ರೀತಿಯಲ್ಲಿ ಮತ್ತು ಮುಂದಿನ ರಾಜಕೀಯ ಭವಿಷ್ಯಕ್ಕೆ ಕುಂದು ತರುವ ನಿಟ್ಟಿನಲ್ಲಿ ಫೇಸ್‌ಬುಕ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ಅಪ್‌ಲೋಡ್ ಮಾಡಲಾಗಿದೆ. ದುಷ್ಕರ್ಮಿಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಬೇಕು~ ಎಂದು ನಂದೀಶ್ ಪ್ರೀತಂ ಸರಸ್ವತಿಪುರಂ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಡಿಸಿಪಿ ಬಸವರಾಜ ಮಾಲಗತ್ತಿ ಅವರಿಗೂ ದೂರನ್ನು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.