ADVERTISEMENT

‘ಬಿಜೆಪಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲ’

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 8:38 IST
Last Updated 30 ಅಕ್ಟೋಬರ್ 2017, 8:38 IST

ಮೈಸೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕಾಂಗ್ರೆಸ್‌ ಪಕ್ಷವು ಸಂವಿಧಾನದ ತತ್ವಗಳ ಮೇಲೆ ನಂಬಿಕೆಯಟ್ಟಿದೆ. ಇದ್ದಕ್ಕಿದ್ದಂತೆ ಅಧಿಕಾರಕ್ಕೆ ಬಂದಿರುವ ಬಿಜೆಪಿಯವರಿಗೆ ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಹೇಳುವುದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದು ಬಿಜೆಪಿಯವರ ಗುಣ. ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆದಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ವ್ಯತ್ಯಾಸ ಇದುವೇ ಆಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಬಿಜೆಪಿಗೆ ಯಾವುದೇ ಸಿದ್ಧಾಂತವಿಲ್ಲ. ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಆಸಕ್ತಿ ಅವರಿಗಿಲ್ಲ. ಬಿಜೆಪಿಯ ಹಿಂದುತ್ವ ಸಿದ್ಧಾಂತವು ಸಂವಿಧಾನ ವಿರೋಧಿ ಎಂದರು.

ADVERTISEMENT

ಹಳೆಯ ಕೇಸು ಮುಂದುವರಿಸಿದ್ದಾರೆ: ಡಿವೈಎಸ್ಪಿ ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡುವ ಪ್ರಶ್ನೆಯೇ ಏಳುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.