ADVERTISEMENT

`ಮರೆಯದೆ ಮತದಾನ ಮಾಡಿ'

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2013, 9:55 IST
Last Updated 3 ಏಪ್ರಿಲ್ 2013, 9:55 IST
ಮೈಸೂರಿನಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿನಿಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಮೈಸೂರಿನಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿನಿಯರು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.   

ಮೈಸೂರು: `ದೇಶ ಅಭಿವೃದ್ಧಿ ಪಥದಲ್ಲಿ ಸಾಗಬೇಕು ಎಂದರೆ ಯುವಕರು ಕಡ್ಡಾಯವಾಗಿ ಮತದಾನ ಮಾಡಬೇಕು. ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು' ಎಂದು ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಹೇಳಿದರು.

ನಗರದ ವಿದ್ಯಾರಣ್ಯಪುರಂನ ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಏರ್ಪಡಿಸಿದ್ದ `ಮೊದಲ ಮತದಾರರ ಜಾಗೃತಿ ಸಮಾವೇಶ'ದಲ್ಲಿ ಮಾತನಾಡಿದರು.

`ಕೆ.ಆರ್.ಕ್ಷೇತ್ರದ 20 ವಾರ್ಡ್‌ಗಳಿಂದ ತಲಾ 25 ಯುವಕರನ್ನು ಇಲ್ಲಿ ಸೇರಿಸಿ ಅವರಲ್ಲಿ ಮತದಾನದ ಅರಿವು ಮೂಡಿಸಲಾಗುತ್ತಿದೆ. ದೇಶ ಪ್ರಗತಿ ಪಥದಲ್ಲಿ ಸಾಗಲು ಉತ್ತಮ ಜನಪ್ರತಿನಿಧಿಗಳು ಆಯ್ಕೆಯಾಗಬೇಕು. ಭಾರತದಲ್ಲಿ ಶೇ 33ರಷ್ಟು ಯುವಜನರು ಇದ್ದಾರೆ. ಇವರೆಲ್ಲರೂ ಮತದಾನ ಮಾಡಬೇಕು. ಬೇರೆಯವರಿಗೂ ಮತ ಹಾಕುವಂತೆ ತಿಳಿಹೇಳಬೇಕು' ಎಂದು ಮನವಿ ಮಾಡಿದರು.

ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ಮಾತನಾಡಿ, `ಪಕ್ಷ, ವ್ಯಕ್ತಿಯನ್ನು ನೋಡಿ ಮತದಾನ ಮಾಡಬೇಕು. ಬಿಜೆಪಿ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ' ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಶಿವಕುಮಾರ್, ಪಾಲಿಕೆ ಸದಸ್ಯ ಮಾ.ವಿ. ರಾಮಪ್ರಸಾದ್, ಕೆ.ಆರ್.ಕ್ಷೇತ್ರದ ಅಧ್ಯಕ್ಷ ಸೋಮಸುಂದರ್, ಜಿಲ್ಲಾ  ಯುವ ಮೋರ್ಚಾ ಅಧ್ಯಕ್ಷ ಜೈಶಂಕರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ರಮೇಶ್, ಸಿಂಡಿಕೇಟ್ ಸದಸ್ಯ ಜಗದೀಶ್, ವಿನಯ್, ಜೋಗಿ ಮಂಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.