ADVERTISEMENT

‘ರಾಜ್ಯದಾದ್ಯಂತ ಏಕರೂಪ ಶಿಕ್ಷಣ ಜಾರಿಯಾಗಲಿ’

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2017, 5:07 IST
Last Updated 2 ಡಿಸೆಂಬರ್ 2017, 5:07 IST

ಬನ್ನೂರು: ರಾಜ್ಯದಲ್ಲಿ ಖಾಸಗಿ ಶಾಲೆಗಳ ಹಾವಳಿಯಿಂದಾಗಿ, ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪುತ್ತಿವೆ. ರಾಜ್ಯದಾದ್ಯಂತ ಏಕ ರೂಪ ಶಿಕ್ಷಣ ವ್ಯವಸ್ಥೆ ಜಾರಿಯಾರಿಗೆಯಾಗಬೇಕು. ಆಗ ಮಾತ್ರ ದೇಶದಲ್ಲಿ ಬಡವ ಶ್ರೀಮಂತ ಎನ್ನುವ ತಾರತಮ್ಯ ಹೋಗಲಾಡಿಸಲು ಸಾಧ್ಯ ಎಂದು ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್‌ಗೌಡ ತಿಳಿಸಿದರು.

ಅವರು ಪಟ್ಟಣದ ಸಮೀಪದ ಲಕ್ಷ್ಮಿಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಯಕರ್ನಾಟಕ ಸಂಘಟನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಗಳ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯಾಗುತ್ತದೆ. ಆಗ ಗಾಂಧೀಜಿ ಅವರ ಕನಸು ನನಸಾದಂತಾಗುತ್ತದೆ. ಮೊದಲು ಗ್ರಾಮೀಣ ಪ್ರದೇಶಗಳ ಸಮಸ್ಯೆಯನ್ನು ಬಗೆಹರಿಸುವತ್ತ ಸರ್ಕಾರ ತನ್ನ ಗಮನ ಕೇಂದ್ರೀಕರಿಸುವಂತೆ ಅವರು ಮನವಿ ಮಾಡಿದರು.

ತಾಲ್ಲೂಕು ಮಹಿಳಾ ಅಧ್ಯಕ್ಷೆ ಎಲ್.ಪಿ. ರೇವತಿ ಮಾತನಾಡಿದರು. ತಾಲ್ಲೂಕು ಗೌರವಾಧ್ಯಕ್ಷ ಯೋಗೀಶ್, ರಾಜೇಶ್, ಆನಂದ, ಗೌರಮ್ಮ, ಮಂಗಳಮ್ಮ, ದೇವರಾಜು, ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.