ADVERTISEMENT

ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2011, 9:50 IST
Last Updated 9 ಸೆಪ್ಟೆಂಬರ್ 2011, 9:50 IST

ಮೈಸೂರು: ದೆಹಲಿ ಹೈಕೋರ್ಟ್ ಆವರಣದಲ್ಲಿ ಉಗ್ರರು ನಡೆಸಿದ ಬಾಂಬ್ ಸ್ಫೋಟವನ್ನು ಖಂಡಿಸಿ ವಕೀಲರು ಗುರುವಾರ ನ್ಯಾಯಾಲಯ ಕಲಾಪ ಬಹಿಷ್ಕರಿಸಿದರು.

ದೆಹಲಿ ಹೈಕೋರ್ಟ್ ಆವರಣದಲ್ಲಿ ಉಗ್ರರು ಬಾಂಬ್ ಸ್ಫೋಟ ನಡೆಸಿರುವುದನ್ನು ವಕೀಲರು ಖಂಡಿಸಿದರು. ಬಾಂಬ್ ಸ್ಫೋಟ ನಡೆಸುವ ಮೂಲಕ ಮಾರಣ ಹೋಮ ನಡೆಸಿರುವುದು ನಾಗರಿಕ  ಸಮಾಜ ತಲೆತಗ್ಗಿಸುವಂತಹ ವಿಚಾರ. ಉಗ್ರರ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು.

ನ್ಯಾಯಾಲಯದ ಆವರಣದಲ್ಲಿ ಮುಕ್ತ ವಾತಾವಾರಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ವಕೀಲರು ಆಗ್ರಹಿಸಿದರು. ವಕೀಲರು ಕಲಾಪದಿಂದ ದೂರ ಉಳಿದಿದ್ದರಿಂದ ನ್ಯಾಯಾಲಯದ ಆವರಣ ಬಣಗುಡು ತ್ತಿತ್ತು. ಮುಂಜಾಗ್ರತಾ ಕ್ರಮ ವಾಗಿ ನ್ಯಾಯಾಲಯದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.