ADVERTISEMENT

ವಿರೋಧ ಪಕ್ಷಗಳ ಅಸಹಕಾರ: ಡಿವಿಎಸ್ ಕಿಡಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2013, 8:34 IST
Last Updated 22 ಏಪ್ರಿಲ್ 2013, 8:34 IST

ತಿ.ನರಸೀಪುರ: ಕಾಂಗ್ರೆಸ್, ಜೆಡಿಎಸ್ ಸರ್ಕಾರಗಳು ಮಾಡದ ಅಭಿವೃದ್ಧಿ ಯೋಜನೆಗಳನ್ನು ಬಿಜೆಪಿ ಸರ್ಕಾರ ಮಾಡಿದೆ. ಆದರೆ ವಿರೋಧ ಪಕ್ಷಗಳು ಬಿಜೆಪಿಗೆ ಸಹಕಾರ ನೀಡದ ಕಾರಣ ನಿರೀಕ್ಷಿತ ಅಭಿವೃದ್ಧಿಯಾಗಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಡಿ.ವಿ. ಸದಾನಂದಗೌಡ ಹೇಳಿದರು.

ತಾಲ್ಲೂಕಿನ ಬನ್ನೂರು ಪಟ್ಟಣದಲ್ಲಿ ಭಾನುವಾರ  ಚುನಾವಣಾ ಪ್ರಚಾರದ ರೋಡ್ ಶೋ ನಡೆಸಿ, ಬಿಜೆಪಿ ಅಭ್ಯರ್ಥಿ ಸಿ.ರಮೇಶ್  ಪರ ಮತಯಾಚಿಸಿ ಮತನಾಡಿದರು.

ರಾಜ್ಯದಲ್ಲಿ ಐದು ದಶಕಗಳ ಕಾಲ ಆಳ್ವಿಕೆ ನಡೆಸಿದ ಕಾಂಗ್ರೆಸ್ ಹಾಗೂ ಒಂದು ದಶಕಗಳ ಕಾಲ ಆಡಳಿತ ನಡೆಸಿದ ಜನತಾ ಪರಿವಾರ ಸರ್ಕಾರಗಳು ಮಾಡದ ಅಭಿವೃದ್ಧಿಯನ್ನು ಬಿಜೆಪಿ ಸರ್ಕಾರ ಮಾಡಿದೆ. ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ವಿರೋಧ ಪಕ್ಷಗಳ ಸಹಕಾರವಿದ್ದರೆ ರಾಜ್ಯದ ಸಂಪೂರ್ಣ ಅಭಿವೃದ್ಧಿ ಮಾಡಬಹುದಿತು ಎಂದು ಆರೋಪಿಸಿದರು.

ಪಕ್ಷದ ಅಭ್ಯರ್ಥಿ ಸಿ.ರಮೇಶ್ ಅವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸಿದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಸಚಿವ ಸ್ಥಾನ ನೀಡುವ ಭರವಸೆಯನ್ನು ಅವರು ನೀಡಿದರು.

ನರಸೀಪುರ ಮೀಸಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಿ.ರಮೇಶ್ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೈಯಂಬಳ್ಳಿ ಜಿ.ನಟರಾಜು, ಸಿಂಡಿಕೇಟ್ ಸದಸ್ಯ ದಾಸಯ್ಯ, ಕ್ಷೇತ್ರದ ಮಾಜಿ ಅಧ್ಯಕ್ಷ ತೋಟದಪ್ಪ ಬಸವರಾಜು, ಯುವ ಮೋರ್ಚಾದ ಅಧ್ಯಕ್ಷ ನುಗ್ಗಹಳ್ಳಿಕೊಪ್ಪಲು ಎಂ. ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಯಡಹಳ್ಳಿ ಶಿವಮೂರ್ತಿ, ಟೌನ್ ಶಕ್ತಿ ಕೇಂದ್ರದ ಅಧ್ಯಕ್ಷ ಎನ್. ಲೋಕೇಶ್, ಗೋ ಸಂರಕ್ಷಣಾ ಜಿಲ್ಲಾ ಸಂಚಾಲಕ ಬಿ.ಪಿ.ಪರಶಿವಮೂರ್ತಿ, ಯುವ ಮೋರ್ಚಾ ಉಪಾಧ್ಯಕ್ಷ ಆರ್.ಅರ್ಜುನ್, ಪ್ರಧಾನ ಕಾರ್ಯದರ್ಶಿ ಬೆನಕನಹಳ್ಳಿ ವಿಜಯ್‌ಕುಮಾರ್, ಮೂಗೂರು ಸಿದ್ದರಾಜು, ಟಿ.ಆರ್. ಶ್ರಿನಿವಾಸ್‌ರಾವ್, ತಲಕಾಡು ನರೇಂದ್ರ ಪುರಸಭಾ ಸದಸ್ಯ ಬಿ.ಸಿ. ಕೃಷ್ಣ, ಹೆಗ್ಗೂರು ರಂಗರಾಜು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.