ADVERTISEMENT

ಶೋಷಿತರ ಧ್ವನಿ ಅರಸು: ವೆಂಕಟೇಶ್

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2012, 6:20 IST
Last Updated 21 ಆಗಸ್ಟ್ 2012, 6:20 IST

ಮೈಸೂರು: ಸಮಾಜದ ಅತಿ ಸಣ್ಣ ಸಮುದಾಯ ಗಳಿಗೂ ರಾಜಕೀಯ ಶಕ್ತಿ ತುಂಬಿದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಜಾತಿ ರಾಜಕಾರಣ ಮಾಡಲಿಲ್ಲ. ಶೋಷಿತರ ಧ್ವನಿಯಾ ಗಿದ್ದರು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಎ.ವೆಂಕಟೇಶ್ ತಿಳಿಸಿದರು.

ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿ ರಾಜೀವ್‌ಗಾಂಧಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.

ದೇವರಾಜ ಅರಸು ಶೋಷಿತರ ಏಳಿಗೆಗಾಗಿ ರೂಪಿಸಿದ ಯೋಜನೆಗಳನ್ನು ದೇಶದ ಇತರ ರಾಜ್ಯಗಳು ಇಂದಿಗೂ ಪಾಲಿಸುತ್ತಿವೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಕರ್ನಾಟಕದ ಗೌರವ ಮಣ್ಣುಪಾಲಾಗಿದೆ.  ಕಳೆದ ನಾಲ್ಕು ವರ್ಷದಿಂದ ಕನ್ನಡಿಗರು ತಲೆತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಕಿಡಿ ಕಾರಿದರು.

ಅರಸು, ರಾಜೀವ್‌ಗಾಂಧಿ ಅವರ ಜನ್ಮದಿನಗಳು ಒಟ್ಟಿಗೆ ಬಂದಿರುವುದು ವಿಶೇಷ. ಮತದಾನದ ಹಕ್ಕನ್ನು 18ನೇ ವಯಸ್ಸಿಗೆ ಇಳಿಸಿ ಯುವ ಸಮೂಹಕ್ಕೆ ಆದ್ಯತೆ ನೀಡಿದರು. ದೂರಸಂಪರ್ಕ ಕ್ಷೇತ್ರವನ್ನು ಅಭಿವೃದ್ಧಿಪಡಿ ಸಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷರಾಗಿ ಶಿವಮಲ್ಲು ಅಧಿಕಾರ ಸ್ವೀಕರಿಸಿದರು.
ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ದಾಸೇಗೌಡ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮೇಯರ್ ಎಂ.ಸಿ.ರಾಜೇಶ್ವರಿ, ನಾಗಭೂಷಣ್, ಸೋಮಸುಂದರ್, ಚಂದ್ರಕಲಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.