ADVERTISEMENT

`ಸಿದ್ದರಾಮಯ್ಯ ಆಡಳಿತ ಅನುಕರಣೀಯ'

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 6:39 IST
Last Updated 2 ಸೆಪ್ಟೆಂಬರ್ 2013, 6:39 IST

ಸಾಲಿಗ್ರಾಮ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡ ಜನತೆಗೆ ಅನುಕೂಲವಾಗಲೆಂದು 60 ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಈ ಯೋಜನೆಗಳಲ್ಲಿ ಸಿಗುವ ಸವಲತ್ತುಗಳು ಅರ್ಹರಿಗೆ ಸಿಗುವಂತೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಹಾಸನಜಿಲ್ಲೆ ಅರಕಲಗೂಡು ಕ್ಷೇತ್ರದ ಶಾಸಕ ಎ. ಮಂಜು ಶನಿವಾರ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

ಕೆ.ಆರ್. ನಗರ ತಾಲ್ಲೂಕಿನ ಭೇರ್ಯ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನೆ ಸಲ್ಲಿಸದ ನಂತರ ಮಾತನಾಡಿದ ಶಾಸಕರು ಅಧಿಕಾರ ತೆಗೆದು ಕೊಂಡ ದಿನವೇ ಸಿದ್ದರಾಮಯ್ಯ    ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಪ್ರಕಟಿಸಿದ್ದ 360 ಪ್ರಣಾಳಿಕೆಗಳ ಪೈಕಿ 60 ಅಂಶಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದರು.

ಸಿದ್ದರಾಮಯ್ಯ ಈ ನಡೆ ಬಡ ಜನತೆ ಮೇಲೆ ಅವರಿಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದರು.
ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಲ್. ರಾಜಶೇಖರ್, ಕಾಂಗ್ರೆಸ್ ಮುಖಂಡರಾದ ಬಿ.ಎಚ್. ಮಹದೇವ್, ಮಂಜೇಗೌಡ, ಮುಷೀರ್, ಗ್ರಾಮ ಪಂಚಾಯಿತಿ ಸದಸ್ಯ ಜಯಪ್ಪ, ಖಾಲಿದ್, ಮೋಗಣ್ಣ, ಕಾಳೇಗೌಡ, ಗಿಡ್ಡುಕುಮಾರ್, ನಾಗೇಶ್, ಮಾರುತಿ, ಶುಭಕರ್, ಕಾಂತರಾಜ್, ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.