ADVERTISEMENT

ಸ್ವಾವಲಂಬಿ ಬದುಕು ರೂಢಿಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 2 ಮೇ 2012, 8:10 IST
Last Updated 2 ಮೇ 2012, 8:10 IST

ತಿ.ನರಸೀಪುರ: ಸರ್ಕಾರಿ ಯೋಜನೆಗಳಡಿ ತರಬೇತಿ ಪಡೆದವರು ಸ್ವಾವಲಂಬಿಗಳಾಗಿ ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿ.ವೆಂಕಟೇಶ್ ಹೇಳಿದರು.

ಸಾಕ್ಷರ ಭಾರತ್ ಯೋಜನೆಯಡಿ ಹೊಲಿಗೆ ತರಬೇತಿ ಪಡೆದ ಮಹಿಳೆಯರಿಗೆ ಜಿಲ್ಲಾ ಮತ್ತು ತಾಲ್ಲೂಕು ಲೋಕ ಶಿಕ್ಷಣ, ವೃತ್ತಿ ಕೌಶಲ ಹಾಗೂ ಜನ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ ತಾಲ್ಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ತರಬೇತಿ ಪ್ರಮಾಣ ಪತ್ರ ವಿತರಿಸಿ ಅವರು ಮಾತನಾಡಿದರು.
 
ಮಹಿಳೆ ಸ್ವಂತ ಉದ್ಯೋಗದಿಂದ ಸ್ವಾವಲಂಬಿಯಾದರೆ ಆಕೆಯ ಕುಟುಂಬಕ್ಕೆ ಆರ್ಥಿಕ ನೆರವು ಸಿಗುತ್ತದೆ ಎಂದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ.ಶಂಕರೇಗೌಡ ಮಾತನಾಡಿ, `ಸಾಕ್ಷರ್ ಭಾರತ್ ಯೋಜನೆಯಡಿ ಕಲಿಕಾ ಕೇಂದ್ರಗಳಲ್ಲಿ ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಿದ್ದೇವೆ.

 ಸಾಕ್ಷರ ಭಾರತ್ ಕಾರ್ಯಕ್ರಮಾಧಿಕಾರಿ ತೇ.ಶಿ.ವಿಶ್ವೇಶ್ವರಯ್ಯ, ಸಂಯೋಜಕಿ ನಾಗಮ್ಮ, ಭೈರಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮ್ಜದ್ ಪಾಷ, ತರಬೇತಿ ಪಡೆದ ಚಂದ್ರಕಲಾ, ಪ್ರಭ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT