ADVERTISEMENT

ಜಿಲ್ಲೆಯಲ್ಲಿ 148 ಮಂದಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2020, 2:10 IST
Last Updated 7 ನವೆಂಬರ್ 2020, 2:10 IST

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 148 ಮಂದಿಗೆ ಕೋವಿಡ್‌ ಕಾಣಿಸಿಕೊಂಡಿದ್ದು, ಸೋಂಕಿತರ ಒಟ್ಟು ಸಂಖ್ಯೆ 48,541ಕ್ಕೆ ಏರಿಕೆಯಾಗಿದೆ.

215 ಮಂದಿ ಗುಣಮುಖರಾಗಿದ್ದಾರೆ. ಇದೀಗ 1,127 ಸಕ್ರಿಯ ಪ್ರಕರಣಗಳು ಇವೆ. ಮತ್ತೆ ಇಬ್ಬರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 970ಕ್ಕೆ ಹೆಚ್ಚಳವಾಗಿದೆ.

485 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 147 ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 298 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 62, ಖಾಸಗಿ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 76, ಕೋವಿಡ್‌ ಕೇರ್‌ ಕೇಂದ್ರದಲ್ಲಿ 46, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 13 ಮಂದಿ ಆರೈಕೆ ಪಡೆಯುತ್ತಿದ್ದಾರೆ.

ADVERTISEMENT

ರೋಗಿಗಳ ಸಂಪರ್ಕಕ್ಕೆ ಬಂದ 92 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 37 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 3 ಹಾಗೂ ಇತರ 16 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಇದುವರೆಗೆ 3,62,696 ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. 7,589 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.