ADVERTISEMENT

ನಂಜನಗೂಡು: ಹಾಲು ಉತ್ಪಾದಕರ ಸಂಘಕ್ಕೆ ₹2 ಲಕ್ಷ ನೆರವು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2023, 14:26 IST
Last Updated 1 ಡಿಸೆಂಬರ್ 2023, 14:26 IST
ನಂಜನಗೂಡು ತಾಲ್ಲೂಕಿನ ಕುರಿಹುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆರವಿನ ರೂಪದಲ್ಲಿ ₹2 ಲಕ್ಷ ಮೊತ್ತದ ಚೆಕ್‌ನ್ನು ತಾಲ್ಲೂಕು ಯೋಜನಾಧಿಕಾರಿ ಗಣೇಶ್ ನಾಯಕ್ ವಿತರಿಸಿದರು
ನಂಜನಗೂಡು ತಾಲ್ಲೂಕಿನ ಕುರಿಹುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೆರವಿನ ರೂಪದಲ್ಲಿ ₹2 ಲಕ್ಷ ಮೊತ್ತದ ಚೆಕ್‌ನ್ನು ತಾಲ್ಲೂಕು ಯೋಜನಾಧಿಕಾರಿ ಗಣೇಶ್ ನಾಯಕ್ ವಿತರಿಸಿದರು   

ನಂಜನಗೂಡು: ತಾಲ್ಲೂಕಿನ ಕುರಿಹುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುವಾರ ನೆರವಿನ ರೂಪದಲ್ಲಿ ₹2 ಲಕ್ಷ ಮೊತ್ತದ ಚೆಕ್‌ನ್ನು ತಾಲ್ಲೂಕು ಯೋಜನಾಧಿಕಾರಿ ಗಣೇಶ್ ನಾಯಕ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರ ಆಶಯದಂತೆ ಗ್ರಾಮಾಭಿವೃದ್ಧಿ, ಮಹಿಳೆಯರ ಸ್ವಾವಲಂಬನೆ ಬದುಕಿಗಾಗಿ ಹಲವಾರು ಯೋಜನೆಗಳು ಸಾಕಾರಗೊಳಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಕೆರೆಕಟ್ಟೆಗಳ ನಿರ್ಮಾಣ, ದೇವಸ್ಥಾನಗಳ ಜೀರ್ಣೋದ್ಧಾರ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಲಾಗುತ್ತಿದೆ’ ಎಂದು ಹೇಳಿದರು.

ಕುರಿಹುಂಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರ್‌ ಉಪಾಧ್ಯಕ್ಷ ಪುಟ್ಟೇಗೌಡ, ನಿರ್ದೇಶಕರಾದ ಬಸವರಾಜಪ್ಪ, ಮಹದೇವ, ಎನ್.ಶಂಭುಲಿಂಗಪ್ಪ, ಮಹದೇವಪ್ಪ, ಬಸವಣ್ಣ, ಕಾರ್ಯದರ್ಶಿ ಆರ್.ಗಿರೀಶ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.