ADVERTISEMENT

ಕೋವಿಡ್‌: 213 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 3:39 IST
Last Updated 3 ಅಕ್ಟೋಬರ್ 2020, 3:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ನಿಂದ 213 ಮಂದಿ ಗುಣಮುಖರಾಗಿದ್ದಾರೆ. 158 ಹೊಸ ಪ್ರಕರಣಗಳು ದೃಢಪಟ್ಟಿವೆ.

ಒಟ್ಟು ಪ್ರಕರಣಗಳ ಸಂಖ್ಯೆ 34,777ಕ್ಕೆ ಏರಿಕೆಯಾಗಿದೆ. ಇದೀಗ 6,391 ಸಕ್ರಿಯ ಪ್ರಕರಣಗಳು ಇವೆ. 4,539 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಇತರರು ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ಮತ್ತೆ 18 ಮಂದಿ ಮೃತಪಟ್ಟಿದ್ದು, ಸತ್ತವರ ಸಂಖ್ಯೆ 780ಕ್ಕೆ ಏರಿಕೆ ಯಾಗಿದೆ. ನಗರದ ಪೊಲೀಸ್‌ ಕಾನ್‌ಸ್ಟೇಬಲ್‌ ಕೂಡಾ ಕೋವಿಡ್‌ಗೆ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.