ADVERTISEMENT

ಮೈಸೂರು | ಸುತ್ತೂರು ಜೆಎಸ್ಎಸ್ ಶಾಲೆಯಲ್ಲಿ 23 ಜೋಡಿ ಅವಳಿ ಮಕ್ಕಳು !

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 14:20 IST
Last Updated 8 ಆಗಸ್ಟ್ 2024, 14:20 IST
ನಂಜನಗೂಡು ತಾಲ್ಲೂಕಿನ ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 23 ಜೋಡಿ ಅವಳಿ ಮಕ್ಕಳು
ನಂಜನಗೂಡು ತಾಲ್ಲೂಕಿನ ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 23 ಜೋಡಿ ಅವಳಿ ಮಕ್ಕಳು   

ನಂಜನಗೂಡು: ತಾಲ್ಲೂಕಿನ ಸುತ್ತೂರು ಜೆಎಸ್‍ಎಸ್ ವಸತಿ ಶಾಲೆಯಲ್ಲಿ ದಾಖಲೆ ಪ್ರಮಾಣದಲ್ಲಿ 23 ಜೋಡಿ ಅವಳಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

ಸುತ್ತೂರು ಮಠದ ಆಶ್ರಯದಲ್ಲಿರುವ ಜೆಎಸ್‍ಎಸ್ ವಸತಿ ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ರಾಜ್ಯ ಮಾತ್ರವಲ್ಲದೇ ಮೇಘಾಲಯ, ಮಣಿಪುರ, ಅರುಣಾಚಲಪ್ರದೇಶ, ಮಿಜೋರಾಂ, ಒರಿಸ್ಸಾ, ಜಾರ್ಖಂಡ್, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಮಹಾರಾಷ್ಟ್ರ ಮೊದಲಾದ ರಾಜ್ಯಗಳ ಮುನ್ನೂರಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ಪ್ರತಿ ವರ್ಷ ಸುತ್ತೂರಿನಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳೂ ಸೇರಿದಂತೆ ಜೆಎಸ್‍ಎಸ್ ವಸತಿ ಶಾಲೆಯಲ್ಲಿ ಒಂದೇ ಚಹರೆಯನ್ನು ಹೊಂದಿರುವ ದಾಖಲೆ ಸಂಖ್ಯೆಯ ಅವಳಿ ಮಕ್ಕಳು ವ್ಯಾಸಂಗಕ್ಕೆ ತೊಡಗಿಸಿಕೊಳ್ಳುವ ಮೂಲಕ ವಿಶಿಷ್ಟ ದಾಖಲೆ ನಿರ್ಮಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.