ADVERTISEMENT

ಕೋವಿಡ್ ಆರೈಕೆ ಕೇಂದ್ರಗಳಾದ 320 ಬೋಗಿಗಳು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 6:54 IST
Last Updated 16 ಆಗಸ್ಟ್ 2020, 6:54 IST
ರೈಲ್ವೆ ಕ್ರೀಡಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಪರ್ಣಾ ಗರ್ಗ್ ರೈಲ್ವೆ ರಕ್ಷಣಾ ದಳದವರಿಂದ ಗೌರವ ವಂದನೆ ಸ್ವೀಕರಿಸಿದರು
ರೈಲ್ವೆ ಕ್ರೀಡಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಅಪರ್ಣಾ ಗರ್ಗ್ ರೈಲ್ವೆ ರಕ್ಷಣಾ ದಳದವರಿಂದ ಗೌರವ ವಂದನೆ ಸ್ವೀಕರಿಸಿದರು   

ಮೈಸೂರು: ಇಲ್ಲಿನ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ಶನಿವಾರ ರೈಲ್ವೆ ಕ್ರೀಡಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ರೈಲ್ವೆ ವ್ಯವಸ್ಥಾಪಕಿ ಅಪರ್ಣಾ ಗರ್ಗ್ ಧ್ವಜಾರೋಹಣ ಮಾಡಿದರು.

ನಂತರ ಮಾತನಾಡಿದ ಅವರು, ‘ನೈರುತ್ಯ ರೈಲ್ವೆಯು 320 ಸ್ಲೀಪರ್ ಬೋಗಿಗಳನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಈ ಪೈಕಿ ವಿಭಾಗದಿಂದ 35 ಸ್ಲೀಪರ್ಸ್ ಬೋಗಿಗಳನ್ನು ಆರೈಕೆ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ. 1,710 ಮಾಸ್ಕ್‌ಗಳು, 22 ಲೀಟರ್ ಹ್ಯಾಂಡ್ ಸ್ಯಾನಿಟೈಸರ್‌ ಮತ್ತು 9,853 ಕವರಲ್‌ಗಳನ್ನು ತಯಾರಿಸಲಾಗಿದೆ. ಈ ಮಧ್ಯೆ 110 ನೌಕರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

ಕೊರೊನಾ ವಾರಿಯರ್ಸ್‌ ಆದ ಈ ವೇಳೆ ರೈಲ್ವೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಸ್ವಚ್ಛತಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.