ಮೈಸೂರು: ಕುವೆಂಪು ಕಲಾನಿಕೇತನ ಸಂಸ್ಥೆಯಿಂದ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್’ ಪ್ರಶಸ್ತಿಗೆ ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ. ಜಯಪ್ರಕಾಶ್ ಗೌಡ, ಮೈಸೂರಿನ ಕಾದಂಬರಿಕಾರ್ತಿ ಲತಾ ರಾಜಶೇಖರ್ ಹಾಗೂ ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಟಿ. ಸತೀಶ್ ಜವರೇಗೌಡ ಭಾಜನವಾಗಿದ್ದಾರೆ.
ಅ.27ರಂದು ಸಂಜೆ 4ಕ್ಕೆ ಇಲ್ಲಿನ ಜಗನ್ಮೋಹನ ಅರಮನೆಯಲ್ಲಿ ನಡೆಯಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲಾನಿಕೇತನದ ಅಧ್ಯಕ್ಷ ಕುವೆಂಪು ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಿ. ಸತೀಶ್ ಜವರೇಗೌಡ
ಲತಾ ರಾಜಶೇಖರ್
ಜಯಪ್ರಕಾಶ್ ಗೌಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.