ADVERTISEMENT

ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ

​ಪ್ರಜಾವಾಣಿ ವಾರ್ತೆ
Published 27 ಜನವರಿ 2018, 9:09 IST
Last Updated 27 ಜನವರಿ 2018, 9:09 IST
ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ
ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ   

ಮೈಸೂರು: ತಾಲ್ಲೂಕಿನ ನಾಗನಹಳ್ಳಿಯ ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವದ ಸಮಾರೋಪ ಸಮಾರಂಭ ನಡೆಯುತ್ತಿದೆ.

ಕಬ್ಬಿನ ಬಿಜೋತ್ಪಾದನೆಯ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ 1917ರಲ್ಲಿ ಇದನ್ನು ಸ್ಥಾಪಿಸಿದ್ದರು.

ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಬೆಳೆ ವಿಮೆ ಬಗ್ಗೆ ರೈತರಿಗೆ ಮಾಹಿತಿ ಕೊರತೆ ಇದೆ. ಬರ ಪರಿಸ್ಥಿತಿಯಲ್ಲಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇನ್ನೂ ಸುಧಾರಿಸಬೇಕು. ಜಮೀನಿನಿಂದ ಮಾರುಕಟ್ಟೆಗೆ ಕೃಷಿ ಉತ್ಪನ್ನ ಸಾಗಣಿಕೆಗೆ ಸರ್ಕಾರ ವಾಹನದ ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದರು.

ADVERTISEMENT

ಲೋಕೋಪಯೋಗಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಸಂಸದ ಆರ್. ಧ್ರುವನಾರಾಯಣ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.