ADVERTISEMENT

ಜಿಟಿಡಿಗೆ ಗಾಳ ಹಾಕಿದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 6:26 IST
Last Updated 6 ಫೆಬ್ರುವರಿ 2018, 6:26 IST

ಮೈಸೂರು: ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಅವರೊಂದಿಗೆ ಇತ್ತೀಚೆಗೆ ಬಿಜೆಪಿ ಸೇರಿರುವ ಮುಖಂಡ ಸಿ.ಪಿ.ಯೋಗೇಶ್ವರ್ ಮಾತುಕತೆ ನಡೆಸಿದ್ದಾರೆ. ಗೌಡರನ್ನು
ಪಕ್ಷಕ್ಕೆ ಸೆಳೆಯುವ ಪ್ರಯತ್ನ ಫಲ ನೀಡಿಲ್ಲ.

ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಪುತ್ರ ಹರೀಶ್‌ಗೆ ಜೆಡಿಎಸ್ ಟಿಕೆಟ್ ಕೈತಪ್ಪಿದೆ. ಹರೀಶ್‌ ಅವರಾದರೂ ಬಿಜೆಪಿಗೆ ಬಂದರೆ ವರುಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಸ್ಪರ್ಧಿಸಲು ಟಿಕೆಟ್ ನೀಡಲಾಗುವುದು.

ಇಲ್ಲದಿದ್ದರೆ ಹುಣಸೂರು ಕ್ಷೇತ್ರದಲ್ಲೇ ಟಿಕೆಟ್ ನೀಡುವುದಾಗಿ ಭರವಸೆ ನೀಡಿದರು. ಆದರೆ, ಈ ಪ್ರಸ್ತಾವಕ್ಕೆ ದೇವೇಗೌಡ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ ಎಂದು ಮೂಲಗಳು
ತಿಳಿಸಿವೆ.

ADVERTISEMENT

‘ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ. ಮಗನನ್ನು ಬೇರೆ ಪಕ್ಷಕ್ಕೆ ಕಳುಹಿಸುವುದಿಲ್ಲ’ ಎಂದು ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಯೋಗೇಶ್ವರ್ ಬಂದ ದಾರಿಗೆ ಸುಂಕವಿಲ್ಲದೆ ಮರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.