ADVERTISEMENT

ಮೈಸೂರು: 64 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 4:05 IST
Last Updated 28 ನವೆಂಬರ್ 2021, 4:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮೈಸೂರು: ಒಂದು ವಾರದ ಅವಧಿಯಲ್ಲಿ ಇಲ್ಲಿನ ಕಾವೇರಿ ನರ್ಸಿಂಗ್‌ ಕಾಲೇಜು ಮತ್ತು ಸೇಂಟ್‌ ಜೋಸೆಫ್ಸ್‌ ನರ್ಸಿಂಗ್ ಕಾಲೇಜುಗಳ 64 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

‘ನ.16 ರಿಂದ 22ರ ವರೆಗಿನ ಅವಧಿಯಲ್ಲಿ ಸೋಂಕು ಕಾಣಿಸಿದೆ. ಮತ್ತಷ್ಟು ಮಂದಿಗೆ ಹರಡದಂತೆ ಮುಂಜಾಗ್ರತೆ ವಹಿಸಿದ್ದೇವೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್‌.ಪ್ರಸಾದ್‌ ತಿಳಿಸಿದರು. ‘ಕರ್ನಾಟಕ -ಕೇರಳ ಗಡಿಪ್ರದೇಶದ ಚೆಕ್ ಪೋಸ್ಟ್‌ನಲ್ಲಿ ಸಿಬ್ಬಂದಿ ನಿಯೋಜಿಸಿ ನಿಗಾ ಇಡಲಾಗಿದೆ’ ಎಂದು ಹೇಳಿದರು.

ಗಡಿಯಲ್ಲಿ ನಿಗಾ: ‘ಕರ್ನಾಟಕ -ಕೇರಳ ಗಡಿಪ್ರದೇಶ ಎಚ್‌.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್‌ನಲ್ಲಿ ಸಿಬ್ಬಂದಿ ನಿಯೋಜಿಸಿ ನಿಗಾ ಇಡಲಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.