ADVERTISEMENT

ಮೈಸೂರಿನಲ್ಲಿ 951 ಮಂದಿಗೆ ಕೋವಿಡ್‌ ದೃಢ; 645 ಮಂದಿ ಗುಣಮುಖ

ಜಿಲ್ಲೆಯಲ್ಲಿ ಮತ್ತೆ 20 ಸಾವು

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2020, 16:41 IST
Last Updated 26 ಆಗಸ್ಟ್ 2020, 16:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ಸಮನೆ ಹೆಚ್ಚುತ್ತಿದ್ದು, ಹೊಸದಾಗಿ 951 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ. ಇದರಿಂದ ಪೀಡಿತರ ಒಟ್ಟು ಸಂಖ್ಯೆ 14,880ಕ್ಕೆ ತಲುಪಿದೆ.

ವೈದ್ಯರ ಮುಷ್ಕರದಿಂದ ಕೆಲ ದಿನಗಳವರೆಗೆ ಕೋವಿಡ್ ಪರೀಕ್ಷೆ ನಡೆದಿರಲಿಲ್ಲ. ಇದೀಗ ರ‍್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್ ಸೇರಿದಂತೆ ಹೆಚ್ಚು ಪರೀಕ್ಷೆಗಳು ನಡೆಯುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲೂ ಏರಿಕೆಯಾಗಿದೆ.

20 ಸಾವು: ಕೋವಿಡ್‌ಗೆ ಮತ್ತೆ 20 ಮಂದಿ ಮೃತಪಟ್ಟಿದ್ದು, ಸತ್ತವರ ಸಂಖ್ಯೆ 381ಕ್ಕೆ ಹೆಚ್ಚಿದೆ. 31, 60 (ಇಬ್ಬರು), 62, 66, 75, 58, 76, 72, 61, 58, 70, ಮತ್ತು 55 ವರ್ಷದ ಪುರುಷರು, 92, 81 ವರ್ಷದ ವೃದ್ಧೆಯರು, 70, 65, 51, 50 ಮತ್ತು 45 ವರ್ಷದ ಮಹಿಳೆಯರು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆಯ ಮಾಹಿತಿ ತಿಳಿಸಿದೆ. ಇವರು ಕಳೆದ ಕೆಲವು ದಿನಗಳಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ADVERTISEMENT

ಒಂದೇ ದಿನ 645 ಮಂದಿ ಗುಣಮುಖರಾಗಿದ್ದಾರೆ. 3,843 ಸಕ್ರಿಯ ಪ್ರಕರಣಗಳು ಇವೆ. ‌ಇದುವರೆಗೆ 2,596 ಮಂದಿಯನ್ನು ಮನೆಯಲ್ಲೇ ಐಸೊಲೇಷನ್‌ ಮಾಡಲಾಗಿದೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 226, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 93, ಕೋವಿಡ್‌ ಕೇರ್‌ ಕೇಂದ್ರದಲ್ಲಿ 519, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 112 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 297 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 543 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇತರ ರಾಜ್ಯ ಮತ್ತು ಜಿಲ್ಲೆಗಳಿಂದ ಬಂದ 185 ಮಂದಿಯಲ್ಲಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 196 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 27 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

ಜಿಲ್ಲೆಯಲ್ಲಿ ಹೊಸದಾಗಿ 162 ಪ್ರದೇಶಗಳನ್ನು ಕಂಟೈನ್‌ಮೆಂಟ್‌ ವಲಯ ಎಂದು ಘೋಷಿಸಲಾಗಿದೆ. ಇದೀಗ 39,250 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇದುವರೆಗೆ 89,101 ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 9,626 ಪರೀಕ್ಷೆಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.