ADVERTISEMENT

ಮೈಸೂರು: ನಾಣ್ಯ ನುಂಗಿ ಮಗು ಸಾವು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2021, 22:38 IST
Last Updated 5 ಸೆಪ್ಟೆಂಬರ್ 2021, 22:38 IST

ಬಿಳಿಕೆರೆ: ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ₹ 5ರ ನಾಣ್ಯ ನುಂಗಿದ ನಾಲ್ಕು ವರ್ಷದ ಹೆಣ್ಣು ಮಗು ಭಾನುವಾರ ಮೃತಪಟ್ಟಿದೆ. ಖುಷಿ ಮೃತ ಬಾಲಕಿ.

ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನುಂಗಿದ್ದಾಳೆ.

ತಕ್ಷಣವೇ ಪಾಲಕರು ಆಕೆಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಸ್ಪಂದಿಸದೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.