ಎಚ್.ಡಿ.ಕೋಟೆ: ‘ಕೇರಳದ ವಯನಾಡ್‌ನ ಭೂಕುಸಿತ ಹಿನ್ನೆಲೆಯಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಜಿಲ್ಲಾಡಳಿತ ವತಿಯಿಂದ ತಜ್ಞ ವೈದ್ಯರ ತಂಡವನ್ನು ಔಷಧಿಗಳೊಂದಿಗೆ ನಿಯೋಜನೆ ಮಾಡಲಾಗಿದೆ’ ಎಂದು ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು ತಿಳಿಸಿದರು.
ತಾಲ್ಲೂಕಿನ ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಬಾವಲಿ ಚೆಕ್ ಪೋಸ್ಟ್‌ನಲ್ಲಿ ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನು ಕೇರಳ ವೈನಾಡುಗೆ ಕಳುಹಿಸಿಕೊಟ್ಟು ಮಾತನಾಡಿ, ‘ನಮ್ಮ ಜಿಲ್ಲೆಯಲ್ಲೂ ಸಹ ಅಗತ್ಯ ಔಷಧಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದೇವೆ’ ಎಂದರು.
‘ತಾಲ್ಲೂಕಿನ ದೊಡ್ಡ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು ನಿಯೋಜನೆ ಮಾಡಿಕೊಂಡಿದ್ದೇವೆ’ ಎಂದು ತಿಳಿಸಿದರು.
ತಹಶೀಲ್ದಾರ್ ಶ್ರೀನಿವಾಸ ಮಾತನಾಡಿ, ‘ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್‌ಗಳನ್ನು ಸಿದ್ದಪಡಿಸಿ ಕೊಂಡಿದ್ದೇವೆ ಹಾಗೂ ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳ್ಳಲಾಗಿದೆ’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ತಜ್ಞರಾದ ಡಾ.ಶ್ರೀನಿವಾಸ್, ಡಾ.ನಾಗೇಶ್ ರಾವ್, ಡಾ.ಶೇಷಾದ್ರಿ, ಡಾ.ವರ್ಷ, ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರ, ರವಿರಾಜ್, ಕಂದಾಯ ಅಧಿಕಾರಿ ಗೌಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.